ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನೆಮ್ಮದಿಯ ಬದುಕನ್ನು ಕಾಣುತ್ತಿದ್ದೇವೆ
ಕುಷ್ಟಗಿ: ಡಾ.ಬಿ.ಆರ್. ಅಂಬೇಡ್ಕರ್ ಸಮಾನತೆ,ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್ ನಾಯಕ ಎಂದು ಜಿಪಂ ಮಾಜಿ ಸದಸ್ಯ ಕೆ.ಮಹೇಶ ಹೇಳಿದರು.
ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದ ಭಾರತ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಇಂದಿನ ಯುವಕರು ಅಂಬೇಡ್ಕರ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಮುಖಂಡ ದೊಡ್ಡಬಸವನಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನೆಮ್ಮದಿಯ ಬದುಕನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.ದಲಿತ ಮುಖಂಡ ಹುಸೇನಪ್ಪ ಹಿರೇಮನಿ ಮಾತನಾಡಿ, ಅಂಬೇಡ್ಕರ ಅಸ್ಪೃಶ್ಯತೆ ಹೋಗಲಾಡಿಸಲು ಅನೇಕ ಹೋರಾಟ ಮಾಡುವ ಮೂಲಕ ಅನೇಕ ಅವಮಾನ ಸಹಿಸಿಕೊಂಡು ಸಂವಿಧಾನ ರಚನೆ ಮಾಡಿಕೊಟ್ಟಿದ್ದಾರೆ. ಎಲ್ಲರೂ ಸಂವಿಧಾನ ಅರ್ಥೈಸಿಕೊಂಡು ನಾವೆಲ್ಲ ಒಂದೇ ಎಂಬ ಭಾವನೆಯೊಂದಿಗೆ ಬದುಕಬೇಕಾಗಿದೆ ಉತ್ತಮ ಶಿಕ್ಷಣ ಪಡೆದುಕೊಂಡು ಸುಭದ್ರ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಬೇಕು ಎಂದರು.
ಕರಿಬಸವ ಶಿವಾಚಾರ್ಯ ಮಹಾಸ್ವಾಮಿ ಆಶೀರ್ವಚನ ನೀಡಿದರು.ಈ ಸಂದರ್ಭದಲ್ಲಿ ದೇವೆಂದ್ರಗೌಡ, ಜಯತೀರ್ಥ ದೇಸಾಯಿ, ಶ್ರೀಶೈಲಪ್ಪ ಮೇಟಿ, ರಮೇಶ ಮದ್ನಾಳ, ಗುದ್ನೆಪ್ಪ ಮೇಟಿ, ಅಮರೇಶ ಪಾಟೀಲ, ಬಸಲಿಂಗಯ್ಯ ಹಿರೇಮಠ, ರಮೇಶ ಎಲಿಗಾರ, ಮಕಾಳೆಪ್ಪ, ರಮೇಶ, ಶರಣಪ್ಪ ಮಾದರ ಸೇರಿದಂತೆ ದಲಿತ ಸಂಘಟನೆಯ ಪ್ರಮುಖರು ಹಾಗೂ ಗ್ರಾಮಸ್ಥರು ಇದ್ದರು.