ಧ್ಯಾನಚಂದ್ ಕ್ರೀಡಾ ಮನೋಭಾವನೆ ಜೀವನದಲ್ಲಿ ಅಳವಡಿಸಿಕೊಳ್ಳಿ

| Published : Aug 31 2025, 02:00 AM IST

ಧ್ಯಾನಚಂದ್ ಕ್ರೀಡಾ ಮನೋಭಾವನೆ ಜೀವನದಲ್ಲಿ ಅಳವಡಿಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅತ್ಯಂತ ಅವಶ್ಯಕ. ಧ್ಯಾನಚಂದ್ ಅವರ ಕ್ರೀಡಾ ಮನೋಭಾವನೆ ಮತ್ತು ಅವರು ಕ್ರೀಡೆಗೆ ನೀಡುವ ಸ್ಫೂರ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಕ್ರೀಡೆಯಲ್ಲಿ ನಾವೂ ಸಾಕಷ್ಟು ಸಾಧಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಕ ವೈ.ಎಚ್. ಬಚನಳ್ಳಿ ಹೇಳಿದರು.

ಮುಂಡರಗಿ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅತ್ಯಂತ ಅವಶ್ಯಕ. ಧ್ಯಾನಚಂದ್ ಅವರ ಕ್ರೀಡಾ ಮನೋಭಾವನೆ ಮತ್ತು ಅವರು ಕ್ರೀಡೆಗೆ ನೀಡುವ ಸ್ಫೂರ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಕ್ರೀಡೆಯಲ್ಲಿ ನಾವೂ ಸಾಕಷ್ಟು ಸಾಧಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಕ ವೈ.ಎಚ್. ಬಚನಳ್ಳಿ ಹೇಳಿದರು. ಅವರು ಶುಕ್ರವಾರ ಇಲ್ಲಿಯ ಶ್ರೀ ಜ.ಅ.ವಿ.ಸಮಿತಿಯ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಜಗದ್ಗುರು ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಮೇಜರ್ ಧ್ಯಾನಚಂದ ರವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚು ಮಹತ್ವಕೊಟ್ಟು ಭಾಗವಹಿಸಿ ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತರಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಸನ್ಮಾನಿತಗೊಂಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅರುಣಾ ಸೋರಗಾವಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪಾಲಕರಾದವರು ಮಕ್ಕಳಲ್ಲಿ ಪಾಠ ಮತ್ತು ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ವಿಷಯಗಳ ಪಾಠಬೋಧನೆ ಎಷ್ಟು ಮುಖ್ಯವೋ ದೈಹಿಕ ಶಿಕ್ಷಣವೂ ಅಷ್ಟೇ ಮುಖ್ಯ. ಎರಡರಲ್ಲಿಯೂ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು. ಪ್ರಾ.ಪಿ.ಎಂ. ಕಲ್ಲನಗೌಡರ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಶಾಲೆಗೆ ಮತ್ತು ವಿದ್ಯಾ ಸಮಿತಿಗೆ ಹೆಸರು ತರುವಂತ ಕೆಲಸ ಮಾಡಬೇಕು ಎಂದರು. ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀಕಾಂತ ಎಂ.ಎಲ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಂಗಡಿ, ಪ್ರೊ.ಐ.ಎನ್. ಪೂಜಾರ ಉಪಸ್ಥಿತರಿದ್ದರು. ಪ್ರೊ.ಎಸ್.ಎಸ್. ಮುಂಡರಗಿಮಠ ಸ್ವಾಗತಿಸಿದರು. ಪ್ರೊ.ಮಂಜುನಾಥ ಲೆಂಡ್ವೆ ನಿರೂಪಿಸಿ, ವಂದಿಸಿದರು.