ಡಾ. ಅಂಬೇಡ್ಕರವರ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶ್ರೀಶೈಲ್

| Published : Apr 15 2024, 01:19 AM IST

ಡಾ. ಅಂಬೇಡ್ಕರವರ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶ್ರೀಶೈಲ್
Share this Article
  • FB
  • TW
  • Linkdin
  • Email

ಸಾರಾಂಶ

ದೇಶಕ್ಕೆ ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡುವ ಸಾಮಾಜಿಕ ಸಮಾನತೆಯ ಪರಿಕಲ್ಪನೆಯನ್ನು ಒಳಗೊಂಡ ಸಂವಿಧಾನ ನೀಡಿದರು. ಅದು ಪ್ರಪಂಚಕ್ಕೆ ಮಾದರಿಯಾಗಿದೆ.

ಕನ್ನಡಪ್ರಭ ವಾರ್ತೆ ಶಹಾಪುರ

ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನ ಆಚರಿಸುವುದರ ಜತೆಗೆ ಅವರು ಬೋಧಿಸಿದ ತತ್ವ, ಸಿದ್ಧಾಂತ ಮತ್ತು ಅವರ ಜೀವನದ ಆದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಉಪನ್ಯಾಸಕ ಶ್ರೀಶೈಲ್ ಡಂಬಾಳ ಹೇಳಿದರು.

ತಾಲೂಕಿನ ದೋರನಹಳ್ಳಿ ಗ್ರಾಮದ ಡಿಡಿಯು ನೀಟ್ ಅಕಾಡೆಮಿ ವತಿಯಿಂದ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯಲ್ಲಿ ಅವರು ಮಾತನಾಡಿದರು.

ಉಪನ್ಯಾಸಕ ಪ್ರಭುಲಿಂಗಯ್ಯ ಹಿರೇಮಠ ಮಾತನಾಡಿ, ಅಂಬೇಡ್ಕರ್ ಅವರು ಶೋಷಿತ ಸಮುದಾಯದಲ್ಲಿ ಜನಿಸಿ, ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿದರು. ಉತ್ತಮ ಶಿಕ್ಷಣ ಪಡೆದರು. ದೇಶಕ್ಕೆ ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡುವ ಸಾಮಾಜಿಕ ಸಮಾನತೆಯ ಪರಿಕಲ್ಪನೆಯನ್ನು ಒಳಗೊಂಡ ಸಂವಿಧಾನ ನೀಡಿದರು. ಅದು ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ಪತ್ತಾರ, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ ಪೂಜಾರಿ, ವಸತಿ ನಿಲಯ ಪಾಲಕ ವಿಶ್ವಪಂಡಿತ, ಮಂಜುಳ ಖಾನಾಪುರ, ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಕ್ಕಮ್ಮ, ಪರಶುರಾಮ ಮಾತನಾಡಿದರು. ಮಾಳಮ್ಮ ನಿರೂಪಿಸಿದರು. ಅಕ್ಕಮ್ಮ ವಂದಿಸಿದರು.