ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಕೀರ್ತಿಶೇಷ್ಠ ಎಚ್.ಕೆ.ವೀರಣ್ಣಗೌಡರ ಸಾಧನೆಗಳನ್ನು ಪದವಿ ಕಾಲೇಜಿನ ಪಠ್ಯ ಪುಸ್ತಕದಲ್ಲಿ ಅಳವಡಿಸುವ ಕಾರ್ಯವಾಗಬೇಕು ಎಂದು ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಗುಬ್ಬಿಗೂಡು ರಮೇಶ್ ಬುಧವಾರ ಹೇಳಿದರು. ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ವೀರಣ್ಣಗೌಡರ 125ನೇ ಜಯಂತಿ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ವೀರಣ್ಣಗೌಡರು ಸ್ವಾತಂತ್ರ್ಯ ಹೋರಾಟಗಾರ, ಸಂಸದರಾಗಿ, ಪತ್ರಿಕೋದ್ಯಮ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಮುಸ್ಸದ್ದಿಯಾಗಿ ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅವಿಸ್ಮರಣೆಯ ಸಾಧನೆ ಮಾಡಿದ್ದಾರೆ ಎಂದು ಬಣ್ಣಿಸಿದರು.ವೀರಣ್ಣಗೌಡರ ಸಾಧನೆ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಪದವಿ ಕಾಲೇಜಿನ ಪಠ್ಯಪುಸ್ತಕದಲ್ಲಿ ಇವುಗಳನ್ನು ಅಳವಡಿಸುವ ಕಾರ್ಯವಾಗಬೇಕು. ಕರ್ನಾಟಕ ಪಠ್ಯಪುಸ್ತಕ ಪ್ರಾಧಿಕಾರ ಪಠ್ಯ ಪುಸ್ತಕದಲ್ಲಿ ವೀರಣ್ಣಗೌಡರ ಸಾಧನೆ ಅಳವಡಿಸುವ ಮೂಲಕ ಇಂದಿನ ಪೀಳಿಗೆಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅವರ ಸಾಧನೆಗಳನ್ನು ಮನನ ಮಾಡಿಕೊಡುವ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಚನ್ನೇಗೌಡ ವಿದ್ಯಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಕೆ.ಟಿ.ಚಂದು, ಕಾರ್ಯದರ್ಶಿ ಅಪೂರ್ವ ಚಂದ್ರ, ಬೆಸಗರಹಳ್ಳಿ ಮಾನಸ ವಿದ್ಯಾ ಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸುನಿಲ್ ಕುಮಾರ್, ಹಿರಿಯ ವಿದ್ಯಾರ್ಥಿ ದಿನೇಶ್ ಕುಮಾರ್ ಹಾಗೂ ವಿದ್ಯಾ ಸಂಸ್ಥೆ ಅಂಗ ಸಂಸ್ಥೆಗಳ ಮುಖ್ಯಸ್ಥರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.ಮಾಜಿ ಸಿಎಂ ಎಸ್.ಎಂ.ಕೃಷ್ಣ 93ನೇ ಹುಟ್ಟುಹಬ್ಬ: ಆರೋಗ್ಯ ಚೇತರಿಕೆಗಾಗಿ ದೇಗುಲದಲ್ಲಿ ಪೂಜೆ ಸಲ್ಲಿಕೆಮದ್ದೂರು:ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ 93ನೇ ಹುಟ್ಟುಹಬ್ಬ ಹಾಗೂ ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಹೊಳೆ ಆಂಜನೇಯ ಸ್ವಾಮಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾವೇರಿ ನೀರಾವರಿ ನಿಗಮದ ಮಾಜಿ ಅಧ್ಯಕ್ಷ ಎನ್.ಶಿವಲಿಂಗಯ್ಯ ನೇತೃತ್ವದಲ್ಲಿ ಕೃಷ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಹೊಳೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕ ದ ನಂತರ ಅರಿಶಿನದ ಅಲಂಕಾರದೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರೆವೇರಿಸಲಾಯಿತು.
ನಂತರ ಶ್ರೀಉಗ್ರ ನರಸಿಂಹಸ್ವಾಮಿ ಮತ್ತು ವೈದ್ಯನಾಥಪುರದ ಶ್ರೀವೈದ್ಯನಾಥೇಶ್ವರ ದೇಗುಲದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಕುಟುಂಬದವರ ಹೆಸರಿನಲ್ಲಿ ಅರ್ಚನ ಸೇವೆ, ಮಹಾ ಮಂಗಳಾರತಿ ಯೊಂದಿಗೆ ವಿಶೇಷ ಪೂಜಾ ಕಾರ್ಯ ಮಹಾಮಂಗಳಾರತಿ ಜರುಗಿದವು.ಎಸ್.ಎಂ .ಕೃಷ್ಣ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ದೀರ್ಘ ಆಯುಷ್ಯ ವಂತರಾಗಿ ಬಾಳ್ವೆ ನಡೆಸಲಿ ಎಂದು ಕಾಡ ಮಾಜಿ ಅಧ್ಯಕ್ಷ ಶಿವಲಿಂಗಯ್ಯ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.