ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಕೊಡುಗೆ ಅನನ್ಯ, ಕನ್ನಡದ ಪ್ರತಿಯೊಬ್ಬ ಕವಿಗಳು ಆಯಾ ಕಾಲದ ಜನಮಾನಸಕ್ಕೆ ತಕ್ಕಂತೆ ಸೂಕ್ತವಾದ ಸಾಹಿತ್ಯ ರಚನೆಯಲ್ಲಿ ತೊಡಗಿ ಇಡೀ ವಿಶ್ವಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ವ್ಯಕ್ತಿಗಳ ಮಹಾನ್ ಕವಿಗಳ ಸಾಲಿನಲ್ಲಿ ನಮ್ಮ ಪ್ರೀತಿಯಕುವೆಂಪು ವಿರಾಜಮಾನರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕು ಆಡಳಿತದಿಂದ ಸೋಮವಾರ ವಿಶ್ವಮಾನವ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಸಿದ್ಧಾಂತ ಮತ್ತು ಮೌಲ್ಯ ಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ತಮ ಬದುಕು ಕಟ್ಟಿ ಕೊಳ್ಳಬಹುದು ಎಂದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕುವೆಂಪು ಕೊಡುಗೆ ಅನನ್ಯ, ಕನ್ನಡದ ಪ್ರತಿಯೊಬ್ಬ ಕವಿಗಳು ಆಯಾ ಕಾಲದ ಜನಮಾನಸಕ್ಕೆ ತಕ್ಕಂತೆ ಸೂಕ್ತವಾದ ಸಾಹಿತ್ಯ ರಚನೆಯಲ್ಲಿ ತೊಡಗಿ ಇಡೀ ವಿಶ್ವಕ್ಕೆ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ವ್ಯಕ್ತಿಗಳ ಮಹಾನ್ ಕವಿಗಳ ಸಾಲಿನಲ್ಲಿ ನಮ್ಮ ಪ್ರೀತಿಯಕುವೆಂಪು ವಿರಾಜಮಾನ ರಾಗಿದ್ದಾರೆ ಎಂದು ಬಣ್ಣಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ .ಬಿ.ಧನಂಜಯ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರು ತಮ್ಮ ವಿಶ್ವಮಾನವ ಸಂದೇಶದ ಮೂಲಕ ಮನುಷ್ಯ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಲತಾ ಕುವೆಂಪು ಕುರಿತು ಪ್ರಧಾನ ಭಾಷಣ ಮಾಡಿದರು. ಗ್ರೇಟ್ ಟು ತಹಸೀಲ್ದಾರ್ ಸೋಮಶೇಖರ್, ಸಮಾಜ ಕಲ್ಯಾಣ ಅಧಿಕಾರಿ ನಾಗರಾಜು, ಶಿರಸ್ತೇದಾರ್ ಲಕ್ಷ್ಮಿ ನರಸಿಂಹ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಕುವೆಂಪು ವೈಚಾರಿಕ ಸಂದೇಶ ಅನುಸರಿಸಿ: ಮಂಜುನಾಥ್

ಹಲಗೂರು: ರಾಷ್ಟ್ರ ಕವಿ ಕುವೆಂಪು ಅವರ ವೈಚಾರಿಕ ಚಿಂತನೆಗಳು ಮತ್ತು ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೇ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ ಎಂದು ಪ್ರಾಂಶುಪಾಲ ಆಲಂಗೂರು ಮಂಜುನಾಥ್ ಅಭಿಪ್ರಾಯಪಟ್ಟರು.

ಹಲಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಕುವೆಂಪು ದಿನಾಚರಣೆಯಲ್ಲಿ ಮಾತನಾಡಿ, ವಿಶ್ವ ಮಾನವ ಎಂದು ಖ್ಯಾತಿ ಪಡೆದ ಕುವೆಂಪು ಅವರ ಸಾಹಿತ್ಯ ಕೃತಿಗಳಲ್ಲಿ ಜೀವನ ಮೌಲ್ಯಗಳು ಅಡಗಿವೆ. ತಮ್ಮ ಅದ್ಭುತ ಚಿಂತನೆ ವಿಚಾರ ಧಾರೆಗಳನ್ನು ಬರಹಗಳ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ನೀಡಿ ಅಜಾರಮರವಾಗಿ ಉಳಿದಿದ್ದಾರೆ ಎಂದು ಸ್ಮರಿಸಿದರು.

ಈ ವೇಳೆ ಸಹಾಯಕ ಪ್ರಾಧ್ಯಾಪಕ ಗಿರೀಶ್, ಪ್ರೊ.ಆನಂದ್, ಉಪನ್ಯಾಸಕ ಚೇತನ ಶ್ರೀ, ಅಧೀಕ್ಷಕರಾದ ಕುಮಾರಸ್ವಾಮಿ, ಶ್ರೀಧರ್, ಗೌರಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.