ಮಾಚಿದೇವರ ಆದರ್ಶ ಅಳವಡಿಸಿಕೊಳ್ಳಿ: ಶಾಸಕ

| Published : Feb 02 2024, 01:02 AM IST

ಸಾರಾಂಶ

12ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರಾಗಿದ್ದಾರೆ. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತ ಕಾಣಿಕೆ ನೀಡಿದ್ದು, ಇಂತಹ ಶರಣರು ಹಾಕಿದ ಮಾರ್ಗದರ್ಶನವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಹೊಸಕೋಟೆ

12ನೇ ಶತಮಾನದಲ್ಲಿ ಮಡಿವಾಳ ಮಾಚಿದೇವ ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶ ಇಂದಿನ ಯುವಕರಿಗೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರಾಗಿದ್ದಾರೆ. ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತ ಕಾಣಿಕೆ ನೀಡಿದ್ದು, ಇಂತಹ ಶರಣರು ಹಾಕಿದ ಮಾರ್ಗದರ್ಶನವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಜಾತಿ ಮುಖ್ಯವಲ್ಲ, ಜೀವನ ಮುಖ್ಯ ಎಂದು ಅವರು ತೋರಿಸಿಕೊಟ್ಟಿದ್ದಾರೆ ಎಂದರು.

ತಹಸೀಲ್ದಾರ್ ವಿಜಯ್ ಕುಮಾರ್ ಮಾತನಾಡಿ, ತಮ್ಮ ಕಾಯಕದ ಮೂಲಕ ಸಮಾಜದ ಕೊಳಕನ್ನು ಹೋಗಲಾಡಿಸಿದ ಕಾಯಕ ಯೋಗಿ ಮಡಿವಾಳ ಮಾಚಿದೇವರು. ಇಂತಹ ಮಹಾನ್ ಶರಣರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅಭ್ಯಸಿಸಬೇಕು. ಮಡಿವಾಳ ಮಾಚಿದೇವರ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ತಾಪಂ ಸಿಇಒ ಚಂದ್ರಶೇಖರ್, ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ರಾಜಣ್ಣ, ಉಪಾಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ನಟೇಶ್, ವೆಂಕಟೇಶ್ ಸೂಲಿಬೆಲೆ, ಮಂಜುನಾಥ್ ನಂದಗುಡಿ, ಹೊಸಕೋಟೆ ವಿಜಿ, ಸೋಲೂರು ಬಸವರಾಜ್, ಕೃಷ್ಣಪ್ಪ, ನಾಗವೇಣಿ, ಶಾಮಲಾ, ಸೇರಿ ಮಡಿವಾಳ ಮಾಚಿದೇವ ಸಮುದಾಯದ ಮುಖಂಡರಿದ್ದರು.(ಫೋಟೋ ಕ್ಯಾಫ್ಷನ್‌)

ಹೊಸಕೋಟೆಯ ತಾಲೂಕು ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ ಶರಣರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.