ವಿದ್ಯಾರ್ಥಿಗಳಲ್ಲಿ ಕೃಷಿ ಹಾಗೂ ಪ್ರಕೃತಿಯ ಬಗ್ಗೆ ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವೆಂದು ಎಂದು ಶಾಸಕ ಷಡಕ್ಷರಿ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ತಿಪಟೂರು
ಕೃಷಿ ಅಭಿವೃದ್ಧಿ, ಪರಿಸರ ಸಂರಕ್ಷಣೆ ಹಾಗೂ ಜೀವ ವೈವಿಧ್ಯ ಉಳಿವಿನಲ್ಲಿ ಕೀಟಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ರೈತರು ಉಪಯುಕ್ತ ಕೀಟಗಳ ಮಹತ್ವವನ್ನು ಅರಿತುಕೊಂಡು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕೃಷಿ ಹಾಗೂ ಪ್ರಕೃತಿಯ ಬಗ್ಗೆ ಆಸಕ್ತಿ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯವೆಂದು ಎಂದು ಶಾಸಕ ಷಡಕ್ಷರಿ ಅಭಿಪ್ರಾಯಪಟ್ಟರು.ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ತಿಪಟೂರಿನ ಕೊನೇಹಳ್ಳಿ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರ, ಕೃಷಿ, ತೋಟಗಾರಿಕೆ ಹಾಗೂ ಇತರೆ ತುಮಕೂರು ಜಿಲ್ಲೆಯ ಅಭಿವೃದ್ಧಿ ಇಲಾಖೆಗಳು ಮತ್ತು ಕಲ್ಪತರು ವಿದ್ಯಾಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕೆಐಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ವಿಸ್ಮಯ ಕೀಟ ಪ್ರಪಂಚ ಕೀಟ ಪ್ರದರ್ಶನ ಹಾಗೂ ತಾಂತ್ರಿಕ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ. ಸುರೇಶ ಅವರು ಕೀಟ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ಕೀಟಗಳ ವೈವಿಧ್ಯತೆ, ಪರಿಸರ ಸಂರಕ್ಷಣೆ ಹಾಗೂ ಜೀವ ವೈವಿಧ್ಯದ ಮಹತ್ವವನ್ನು ವಿವರಿಸಿದರು.ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರ, ಕೊನೇಹಳ್ಳಿ, ಮುಖ್ಯಸ್ಥರಾದ ಡಾ. ಶಂಕರ್ ಮಾತನಾಡಿ ವಿಸ್ಮಯ ಕೀಟ ಪ್ರಪಂಚ ಟ ಪ್ರದರ್ಶನ ಹಾಗೂ ತಾಂತ್ರಿಕ ವಿಚಾರ ಸಂಕಿರಣಕ್ಕೆ ಮೊದಲ ದಿನವೇ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು, ರೈತರು, ಶಿಕ್ಷಕರು, ಯುವಜನರು ಹಾಗೂ ಪ್ರಕೃತಿ ಪ್ರೇಮಿಗಳು ಈ ಅಪರೂಪದ ಕೀಟ ಪ್ರದರ್ಶನ, ಕೀಟ ಮತ್ತು ಪಕ್ಷಿಗಳ ಛಾಯಾಚಿತ್ರ ಗ್ಯಾಲರಿಯನ್ನು ವೀಕ್ಷಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಯೋಗಿಶ್ ಹಾಗೂ ತಾಲೂಕು ಕೃಷಿಕ ಸಮಾಜದ ತಾಲೂಕು ನಿರ್ದೇಶಕರು ಹಾಗೂ ಕಲ್ಪತರು ವಿದ್ಯಾ ಸಂಸ್ಥೆಯ ಶ್ರೀ ಸಂಗಮೇಶ್ ರವರು ಭಾಗವಹಿಸಿ ರೈತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷರಾದ ಮೋಹನ್ ಮತ್ತು ಸದಸ್ಯರು, ಹಾಸನದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೋಹನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದಯ್, ಹಾಸನದ ಪಕ್ಷಿಗಳ ವೀಕ್ಷಣೆ ಘಟಕದ ದೇಸಾಯಿ, ಕೃಷಿ, ತೋಟಗಾರಿಕಾ ಹಾಗೂ ರೇಷ್ಮೆ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ರೈತ ಉತ್ಪಾದಕ ಸಂಘದ ಸದಸ್ಯರುಗಳು, ಕೃಷಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು, ಶಾಲ ವಿದ್ಯಾರ್ಥಿಗಳು, ಶಿಕ್ಷಕರು, ಕೃಷಿ ಹಾಗೂ ಪಶುಸಖಿಯರು, ಕೃಷಿ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳು, ಕೆವಿಕೆಯ ಸಿಬ್ಬಂದಿ ಭಾಗವಹಿಸಿದ್ದರು.