ಮಹಾನ್‌ ನಾಯಕರ ಆದರ್ಶಗಳನ್ನು ಅಳವಡಿಸಿಕೊಳ್ಳಿ

| Published : Aug 16 2024, 12:48 AM IST

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆ ಮೂಲಕ ಮಹಾನ್‌ ನಾಯಕರ ಆದರ್ಶ ಸದ್ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಲೂರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಸ್ವಾತಂತ್ರ್ಯ ದಿನಾಚರಣೆ ಮೂಲಕ ಮಹಾನ್‌ ನಾಯಕರ ಆದರ್ಶ ಸದ್ಗುಣಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಲೂರು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ-ಸಡಗರ ಎಲ್ಲೆಡೆ ನಡೆಯುತ್ತಿದೆ. ಜೊತೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಟ ನಡೆಸಿದ ಮಹಾನ್ ನಾಯಕರ ಸದ್ಗುಣಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಮಾತನಾಡಿ, ಮಹಾನ್ ನಾಯಕರ ಸ್ವಾತಂತ್ರ್ಯ ಹೋರಾಟದ ಫಲವಾಗಿ ಇಂದು ಗಾಂಧೀಜಿ, ಸುಭಾಷ್ ಚಂದ್ರಬೋಸ್ ಇನ್ನಿತರ ಮಹಾನ್ ನಾಯಕರ ನೆನೆಯುವ ದಿನವಾಗಿದೆ ಎಂದರು.

ಡ್ರೋನ್ ಕ್ಯಾಮೆರಾದಲ್ಲಿ ನೃತ್ಯ ಪ್ರದರ್ಶನ ಸೆರೆ:

ಬಂಡಳ್ಳಿ ಸರ್ಕಾರಿ ಶಾಲೆಯಲ್ಲಿ ವಿಶೇಷವಾಗಿ 78ನೇ ಸ್ವಾತಂತ್ರ್ಯ ದಿನವನ್ನು ಅದ್ಧೂರಿಯಾಗಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳ ನೃತ್ಯ ಪ್ರದರ್ಶನ ಡ್ರೋನ್ ಕ್ಯಾಮೆರಾದಲ್ಲಿ ಸೆರೆಹಿಡಿದು ವಿನೂತನವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವಿವಿಧಡೆ 78ನೇ ಸ್ವಾತಂತ್ರ್ಯೋತ್ಸವ:

ವನ್ಯಧಾಮದ ಅರಣ್ಯ ಪ್ರದೇಶದಲ್ಲಿರುವ ವರ್ತನೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಣೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾಮಪುರ ಹಾಗೂ ಮಾ.ಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸಹ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಿದರು.