ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ತತ್ವಾದರ್ಶ ಅಳವಡಿಸಿಕೊಳ್ಳಿ: ರವಿ ಅಂಗಡಿ

| Published : May 11 2024, 01:30 AM IST

ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ತತ್ವಾದರ್ಶ ಅಳವಡಿಸಿಕೊಳ್ಳಿ: ರವಿ ಅಂಗಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಷ್ಟಗಿ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಕುಷ್ಟಗಿ: ಬಸವಣ್ಣನವರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ಬಹುದೊಡ್ಡ ಬದಲಾವಣೆ ತರಲು ಪ್ರಯತ್ನಿಸಿದ ಮಹಾನ್ ಮಾನವತಾವಾದಿ ಎಂದು ತಹಸೀಲ್ದಾರ್ ರವಿ ಅಂಗಡಿ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಸವಣ್ಣನವರು ವಚನಗಳ ಮೂಲಕ ನೀಡಿದ ಸಮಾನತೆ, ಕಾಯಕತತ್ವ, ದಾಸೋಹ ತತ್ವ ಮುಂತಾದ ವಿಚಾರಧಾರೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದರು.

14ನೇ ಶತಮಾನದ ಸ್ತ್ರೀಕುಲದ ದೇವತೆ ಹೇಮರಡ್ಡಿ ಮಲ್ಲಮ್ಮ ಅವರು ತಮ್ಮ ಬದುಕಿನಲ್ಲಿ ಎದುರಿಸಿದ ಸಂಕಷ್ಟಗಳನ್ನೇ ಸಾಧನೆಯ ಮೆಟ್ಟಿಲುಗಳನ್ನಾಗಿ ಬದಲಾಯಿಸಿ ಸಮಾಜದ ಒಳಿತಿಗೆ ಶ್ರಮಿಸಿದರು. ಅವರ ತತ್ವ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾಜಿ ಶಾಸಕ ಕೆ. ಶರಣಪ್ಪ, ಬಸವ ಸಮಿತಿಯ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಟಿ. ಬಸವರಾಜ, ಶಿವಪುತ್ರಪ್ಪ ಸುಂಕದ, ಡಾ. ಶಿವಲಿಂಗಪ್ರಭು ಸುಂಕದ, ರಾಮನಗೌಡ ಪಾಟೀಲ್, ಜೆ. ಶರಣಪ್ಪ, ಸೋಮನಗೌಡ ಪಾಟೀಲ್, ಮಹಾದೇವಪ್ಪ ಮಹಾಲಿಂಗಪುರ, ಶಿವಮ್ಮ ಸಜ್ಜನ, ಸರೋಜಿನಿ, ವೀರೇಶ ಬಂಗಾರಶೆಟ್ಟರ್, ಶಿವಾಜಿ ಹಡಪದ, ಗ್ರೇಡ್-2 ತಹಸೀಲ್ದಾರ್ ಮುರಳೀಧರ, ಜಿ. ಸತೀಶ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ, ತಾಲೂಕು ಬಸವ ಸಮಿತಿ ಪದಾಧಿಕಾರಿಗಳು ಇದ್ದರು.

ವಿವಿಧೆಡೆ ಆಚರಣೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಡಾ. ಎಸ್.ವಿ. ಡಾಣಿ ಅವರು ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣ ಹಾಗೂ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಣೆ ಮಾಡಿದರು.

ಕುಷ್ಟಗಿ ತಾಲೂಕಿನ ದೋಟಿಹಾಳದ ಶುಖಮುನಿ ಸ್ವಾಮಿಗಳ ದೇವಸ್ಥಾನದಲ್ಲಿ ಬಸವ ಸಮಿತಿ ವತಿಯಿಂದ ಬಸವ ಜಯಂತಿ ಆಚರಿಸಲಾಯಿತು. ಸಾಹಿತಿಯಾದ ನಿಂಗಪ್ಪ ಸಜ್ಜನ ಅವರು ಬಸವಣ್ಣನವರ ಕುರಿತು ಮಾತನಾಡಿದರು. ಅಧ್ಯಕ್ಷ ಸೋಮನಾಥ ಹಿರೇಮಠ, ಪ್ರಭುದೇವ ಕಲ್ಯಾಣಮಠ, ದೊಡ್ಡನಗೌಡ ಮಾಟೂರ, ಶಿವಕುಮಾರಸ್ವಾಮಿ, ಶರಣಪ್ಪ ಗೋತಗಿ, ಅಯ್ಯಪ್ಪ ಗೋತಗಿ, ಮಹೇಶ ಕುಂಬಾರ, ಸುರೇಶ ಹುನಗುಂದ, ಅಮರಯ್ಯ, ಚಂದ್ರು, ಜಗದೀಶ, ನಾಗನಗೌಡ, ಕುಪ್ಪನಗೌಡ ಇದ್ದರು.