ಸೇವಲಾಲರ ತತ್ವಾದರ್ಶ ಅಳವಡಿಸಿಕೊಳ್ಳಿ: ಬಸವರಾಜ ತೆನ್ನಳ್ಳಿ

| Published : Feb 17 2025, 12:31 AM IST

ಸಾರಾಂಶ

ಪ್ರತಿಯೊಬ್ಬರು ಸಂತ ಸೇವಾಲಾಲರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಪ್ರತಿಯೊಬ್ಬರು ಸಂತ ಸೇವಾಲಾಲರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಹಸೀಲ್ದಾರ ಬಸವರಾಜ ತೆನ್ನಳ್ಳಿ ಹೇಳಿದರು.

ಪಟ್ಟಣದ ಮಾರನಾಳ ರಸ್ತೆಯಲ್ಲಿರುವ ಶ್ರೀ ಸಂತ ಸೇವಲಾಲ ವೃತ್ತದಲ್ಲಿ ತಾಲೂಕಾಡಳಿತ ಹಾಗೂ ಬಂಜಾರ ಸಮಾಜದ ಸಹಯೋಗದಲ್ಲಿ ಆಯೋಜಿಸದ್ದ ಶ್ರೀ ಸಂತ ಸೇವಲಾಲ್ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಕ್ತಿ ಮತ್ತು ಧ್ಯಾನದ ಮೂಲಕ ಆಧ್ಯಾತ್ಮವನ್ನು ಅನುಸರಿಸಿದ ಸೇವಾಲಾಲರು ಲಂಬಾಣಿ ಜನಾಂಗದ ಸರ್ವಶ್ರೇಷ್ಠ ದಾರ್ಶನಿಕರಾಗಿ ಗುರುತಿಸಿಕೊಳ್ಳುವ ಮೂಲಕ ಸಮಾಜದ ಎಲ್ಲ ವರ್ಗದ ಜನರ ಏಳ್ಗೆಗೆಗಾಗಿ ಶ್ರಮಿಸಿದ್ದಾರೆ ಎಂದರು.

ಹಿರಿಯ ಮುಖಂಡ ಬಸವಲಿಂಗಪ್ಪ ಭೂತೆ ಮಾತನಾಡಿ, ತಾಲೂಕಿನಲ್ಲಿ ಲಂಬಾಣಿ ಸಮುದಾಯದವರು ಶೈಕ್ಷಣಿಕವಾಗಿ ಮುಂದೆ ಬರುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಗತಿ ಸಾಧಿಸಲು ಶಿಕ್ಷಣ ಮತ್ತು ಸಂಘಟನೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಬಂಜಾರ ಸಮಾಜದ ತಾಲೂಕಾಧ್ಯಕ್ಷ ಶೀನಪ್ಪ ನಾಯಕ, ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಮುಖಂಡ ವೀರಣ್ಣ ಹುಬ್ಬಳ್ಳಿ, ಈಶ್ವರ ಅಟಮಾಳಗಿ, ಸಿ.ಎಚ್. ಪೋಲಿಸಪಾಟೀಲ, ವೆಂಕಟೇಶ ನಾಯಕ ಮಾತನಾಡಿದರು.

ಈ ಸಂದರ್ಭ ಪಪಂ ಮುಖ್ಯಾಧಿಕಾರಿ ನಾಗೇಶ, ಸದಸ್ಯ ವಸಂತಕುಮಾರ ಭಾವಿಮನಿ, ಮುಖಂಡರಾದ ಡಾ. ಶಿವನಗೌಡ ದಾನರಡ್ಡಿ, ಮಲ್ಲಿಕಾರ್ಜುನ ಜಕ್ಕಲಿ, ಯಲ್ಲಪ್ಪ ನಾಯಕ್, ಅಚ್ಚಪ್ಪ ನಾಯಕ, ಪರಸಪ್ಪ ನಾಯಕ ಮತ್ತಿತರರು ಇದ್ದರು.