ಕುಷ್ಟಗಿ: ಕಾಯಕವೇ ಕೈಲಾಸ ಎಂಬ ಬಸವಣ್ಣನವರ ತತ್ವ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಕಾಯಕದಲ್ಲಿ ತೊಡಗಬೇಕು ಎಂದು ತಾಪಂ ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಹೇಳಿದರು.

ತಾಲೂಕಿನ ಕ್ಯಾದಿಗುಪ್ಪ ಗ್ರಾಪಂ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2027-28 ನೇ ಸಾಲಿನ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನಡೆದ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಐಇಸಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಯಕವೇ ಕೈಲಾಸ ಕೆಲಸ ಮಾಡಿ ಕೈಲಾಸ ಕಾಣಬೇಕು ಎಂದು ಬಸವಣ್ಣನವರು ಹೇಳಿದ್ದಾರೆ ಅವರ ಆಶಯದಂತೆ ನರೇಗಾ ಯೋಜನೆಯಡಿ ಕೆಲಸ ಮಾಡುವ ಅಕುಶಲ ಕೂಲಿಕಾರರು ಬಸವಣ್ಣನವರ ತತ್ವ ಪಾಲನೆ ಮಾಡಿಕೊಂಡು ಹೋಗಬೇಕು. ಪ್ರತಿ ಕುಟುಂಬಕ್ಕೂ ಕಡ್ಡಾಯವಾಗಿ ಕೆಲಸ ನಿರ್ವಹಿಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಗ್ರಾಪಂದಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಹಿರಿಯ ಕೂಲಿ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿದ್ಯಾಶ್ರೀ, ತಾಪಂ ಐಇಸಿ ಸಂಯೋಜಕ ಚಂದ್ರಶೇಖರ ಜಿ.ಹಿರೇಮಠ, ಗ್ರಾಪಂ ಸಿಬ್ಬಂದಿ ಜಾಫರ್,ಅಂಬಿಕಾ ಗದ್ದಿ, ಶರಣಪ್ಪ ತಳವಾರ, ಬಸವರಾಜ್ ಚಳಿಗೇರಿ ಹಾಗೂ ಕಾಯಕ ಬಂಧು ಗ್ಯಾನಪ್ಪ ಮೆಂಟಿಗೇರಿ, ಬಾಲಪ್ಪ ಕರೆಗುಡ್ಡ, ರಾಜಾಸಾಬ್, ಊರಿನ ಗುರು ಹಿರಿಯರು ಮತ್ತು 100ಕ್ಕೂ ಹೆಚ್ಚು ಜನ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.