ಸಾರಾಂಶ
ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ನಡೆಯಿತು. ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಶ್ರದ್ಧಾನಂದಜಿ ಮೊದಲ ಅವಧಿ ನಡೆಸಿಕೊಟ್ಟರು. 2ನೇ ಅವಧಿಯಲ್ಲಿ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್‌ನ ಹಿರಿಯ ಕಾರ್ಯಕ್ರಮ ನಿರ್ವಾಹಕ ಸಂದೀಪ್ ವಸಿಷ್ಠ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಯುವ ಸಮುದಾಯ ಬಲಿಷ್ಠವಾದಾಗ ಮಾತ್ರ ದೇಶ ಸುಭದ್ರವಾಗಿರಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ದೇಶದ ಕಲ್ಪನೆಯ ಸದ್ವಿಚಾರಗಳೊಂದಿಗೆ ಮುನ್ನಡೆಯಬೇಕು. ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶವನ್ನು ಅಥೈಸಿಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ನೀಡಿದ್ದಾರೆ.ನಗರದ ರಾಮಕೃಷ್ಣ ಮಿಷನ್‌ನಲ್ಲಿ ಶುಕ್ರವಾರ ‘ಮೇಧಾ ’- ಪದವಿ ವಿದ್ಯಾರ್ಥಿಗಳ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರು ಸ್ವಾಭಿಮಾನದ ನಿಜ ಸಂಕೇತ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಉಪಸ್ಥಿತರಿದ್ದರು. ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ದೀಕ್ಷಿತ್ ರೈ ಕಾರ್ಯಕ್ರಮ ಉದ್ಘಾಟಿಸಿದರು.ಉದ್ಘಾಟನಾ ಸಮಾರಂಭದ ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ನಡೆಯಿತು. ಕಾನ್ಪುರದ ರಾಮಕೃಷ್ಣ ಮಿಷನ್ ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಶ್ರದ್ಧಾನಂದಜಿ ಮೊದಲ ಅವಧಿ ನಡೆಸಿಕೊಟ್ಟರು. 2ನೇ ಅವಧಿಯಲ್ಲಿ ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್‌ನ ಹಿರಿಯ ಕಾರ್ಯಕ್ರಮ ನಿರ್ವಾಹಕ ಸಂದೀಪ್ ವಸಿಷ್ಠ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ನಂತರ ನಡೆದ ಸಂವಾದದಲ್ಲಿ ಉಡುಪಿಯ ಡಾ.ಎಂ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ, ಮಂಗಳೂರಿನ ಚೇರ್ ಸ್ಟುಡಿಯೋ ಪ್ರೊಪ್ರೈಟರ್ ರಾಘವೇಂದ್ರ ನೆಲ್ಲಿಕಟ್ಟೆ ವಿಚಾರ ಮಂಡನೆ ಮಾಡಿದರು.
ಕ್ಯಾ.ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳರ್ಪಾಡಿ ವಂದಿಸಿದರು. ಸಂತೋಷ್ ಆಳ್ವ ಎಕ್ಕಾರು ನಿರೂಪಿಸಿದರು.