Adoption of 2 tigers on the occasion of B.V. Srinivas's birthday

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಅಂಗವಾಗಿ ಭಾನುವಾರ ಯುವ ಕಾಂಗ್ರೆಸ್ ವತಿಯಿಂದ ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಹುಲಿಗಳನ್ನು ದತ್ತು ಪಡೆಯುವ ಮೂಲಕ ಪರಿಸರ ಕಾಳಜಿಯ ಸಂದೇಶ ಸಾರಲಾಯಿತು.

ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಸೂಡಾ ಅಧ್ಯಕ್ಷ ಸಿ.ಜಿ. ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ನಗರಾಧ್ಯಕ್ಷ ಚರಣ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‍ಎಸ್‍ಯುಐ ಸಂಘಟನೆಗಳ ಕಾರ್ಯಕರ್ತರು ಹುಲಿಧಾಮದ ''''''''''''''''ಪೂರ್ಣಿಮಾ'''''''''''''''' ಮತ್ತು ''''''''''''''''ವಿಕ್ರಂ'''''''''''''''' ಹೆಸರಿನ ಎರಡು ಹುಲಿಗಳನ್ನು ದತ್ತು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ ಗೌಡ ಮಾತನಾಡಿ,

ನಾಯಕರ ಜನ್ಮದಿನವನ್ನು ಕೇವಲ ಕೇಕ್ ಕತ್ತರಿಸಿ, ಹಾರ-ತುರಾಯಿಗಳೊಂದಿಗೆ ಆಚರಿಸುವುದಕ್ಕಿಂತ ಪ್ರಕೃತಿ ಮತ್ತು ವನ್ಯಜೀವಿಗಳ ಉಳಿವಿಗೆ ನಮ್ಮ ಕೈಲಾದ ಕೊಡುಗೆ ನೀಡುವುದು ಹೆಚ್ಚು ಅರ್ಥಪೂರ್ಣ. ಇಂತಹ ಸಾರ್ಥಕ ಕಾರ್ಯದ ಮೂಲಕ ನಮ್ಮ ನೆಚ್ಚಿನ ನಾಯಕ ಬಿ.ವಿ. ಶ್ರೀನಿವಾಸ್ ಅವರಿಗೆ ಶುಭಾಶಯ ಕೋರುತ್ತಿದ್ದೇವೆ ಎಂದು ತಿಳಿಸಿದರು.

ಸೂಡಾ ಅಧ್ಯಕ್ಷ ಸಿ.ಜಿ.ಮಧು ಸೂದನ್ ಮಾತನಾಡಿ, ವನ್ಯಜೀವಿಗಳು ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಇಂತಹ ಪ್ರಯತ್ನಗಳು ಮತ್ತಷ್ಟು ಜನರಿಗೆ ಪ್ರೇರಣೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‍ಎಸ್‍ಯುಐ ಸಂಘಟನೆಗಳ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡು, ಹುಲಿಗಳ ಸಂರಕ್ಷಣೆಯ ಸಂಕಲ್ಪದೊಂದಿಗೆ ಬಿ.ವಿ. ಶ್ರೀನಿವಾಸ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದು ವಿಶೇಷ ಎನಿಸಿತು.----------------------

ಪೋಟೋ: 09ಎಸ್‌ಎಂಜಿಕೆಪಿ08