ಸಾರಾಂಶ
ಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ
ಕಾರವಾರ: ರೋಗ ನಿರೋಧಕ ಶಕ್ತಿ ಕುಂಠಿತಗೊಂಡಿರುವ ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವುದರಿಂದ ಸಮುದಾಯದಲ್ಲಿ ಕ್ಷಯ ಸೋಂಕಿನ ಪ್ರಮಾಣ ಕಡಿಮೆಯಾಗುವಲ್ಲಿ ಈ ಲಸಿಕೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಪಂ ಸಿಇಒ ಡಾ.ದಿಲೀಷ್ ಶಶಿ ತಿಳಿಸಿದರು.
ಅವರು ಬುಧವಾರ ಬೈತಕೋಲ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವತಃ ವಯಸ್ಕರ ಬಿಸಿಜಿ ಲಸಿಕೆ ಪಡೆದು ಮಾತನಾಡಿದರು.ಕೇಂದ್ರ ಸರ್ಕಾರ ಕ್ಷಯರೋಗ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಕ್ಷಯರೋಗದ ವಿರುದ್ಧ ರಕ್ಷಣೆ ನೀಡಲು ವಯಸ್ಕರಿಗೆ ಬಿಸಿಜಿ ಲಸಿಕೆ ನೀಡುವ ಮಹತ್ವದ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ದೇಶದಲ್ಲಿ 274 ಜಿಲ್ಲೆಗಳಲ್ಲಿ, ಕರ್ನಾಟಕದ 16 ಜಿಲ್ಲೆಗಳಲ್ಲಿ ವಯಸ್ಕ ಬಿಸಿಜಿ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ 2ನೇ ಹಂತದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಜಿ ಲಸಿಕಾಕರಣ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 22148 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಆರ್.ಸಿ.ಎಚ್. ಅಧಿಕಾರಿಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಗುಫಾ ಮತ್ತಿತರರು ಇದ್ದರು.