ಸಾರಾಂಶ
ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮ ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಕೃಷಿ ಸಖಿಯರು ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಹೇಳಿದರು.ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ಸಂಜೀವಿನಿ - ಕರ್ನಾಟಕ ಗ್ರಾಮೀಣ ಜೀವನೋಪಾಯ ಅಭಿಯಾನ ಪ್ರಾಯೋಜನೆ ಇವರ ಸಹಯೋಗದಲ್ಲಿ ನಡೆದ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿಯರಿಗೆ) ಕೃಷಿ ಜೀವನೋಪಾಯದ ಬಗ್ಗೆ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.
ತಾಂತ್ರಿಕ ತರಗತಿಯಲ್ಲಿ ಕೃಷಿ ಸಖಿಯರು ಗ್ರಾಮೀಣ ಮಟ್ಟದಲ್ಲಿ ಕೃಷಿ ವಿಸ್ತರಣಾ ಕಾರ್ಯಕರ್ತರಂತೆ ಕೆಲಸ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.ವಿಜ್ಞಾನಿ ಡಾ.ವೆಂಕಟೇಗೌಡ ಮಾತನಾಡಿ, ರಾಗಿ, ಜೋಳ, ತೊಗರಿ ಮತ್ತು ಅವರೆ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಬೀಜೋಪಚಾರ, ನೀರು ನಿರ್ವಹಣೆ, ಕಳೆ ನಿರ್ವಹಣೆ, ಕೃಷಿ ಹವಾಮಾನ ಬದಲಾವಣೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಇತರೆ ಬೇಸಾಯ ಕ್ರಮಗಳ ಬಗ್ಗೆ ತಿಳಿಸಿದರು.
ಮಣ್ಣು ವಿಜ್ಞಾನಿ ಡಾ.ವೀರನಾಗಪ್ಪ ಮಾತನಾಡಿ, ಮಣ್ಣಿನ ವಿಧಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ಕೊಟ್ಟಿಗೆ ಗೊಬ್ಬರ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಬೆಳೆಗಳಲ್ಲಿ ಪೋಷಕಾಂಶ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಿಂದ ಆಯ್ಕೆಯಾದ 34 ಕೃಷಿ ಸಖಿಯರಿಗೆ ಕೃಷಿ ಜೀವನೋಪಾಯದ ಬಗ್ಗೆ ಆರು ದಿನಗಳ ತರಬೇತಿಯನ್ನು ನೀಡಲಾಯಿತು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸ ರೆಡ್ಡಿ, ಮೇಘನಾ, ಡಾ.ಜಿ.ಈಶ್ವರಪ್ಪ, ಡಾ.ಶ್ವೇತ,
ಕೇಂದ್ರದ ವಿಜ್ಞಾನಿಗಳಾದ ಡಾ.ಜೆ.ವೆಂಕಟೇ ಗೌಡ, ಡಾ.ಜಿ.ಈಶ್ವರಪ್ಪ ಹಾಗೂ ಸಂಜೀವಿನಿ - ಕರ್ನಾಟಕ ಗ್ರಾಮೀಣ ಜೀವನೋಪಾಯ ಅಭಿಯಾನ ಪ್ರಾಯೋಜನೆಯ ನಿರ್ದೇಶಕ ವಿಠ್ಠಲ್ ಕಾವಳೆ, ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಮಂಜುಳಾ ಭಾಗವಹಿಸಿದ್ದರು.