ಸಾರಾಂಶ
ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಒಂದು ವಾರದೊಳಗೆ ಶೇ.100ರಷ್ಟು ಅನುದಾನ ಖರ್ಚು ಮಾಡಿಕೊಂಡು ಪ್ರಗತಿ ಸಾಧಿಸಬೇಕು
ರಾಯಚೂರು: ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಒಂದು ವಾರದೊಳಗೆ ಶೇ.100ರಷ್ಟು ಅನುದಾನ ಖರ್ಚು ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಬುಧವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಮತ್ತು ಬಿಡುಗಡೆಯಾದ ಅನುದಾನ ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡುವಂತೆ ತಿಳಿಸಿದರು.ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳನ್ನು ಹಾಗೂ ಇಲಾಖೆಗೆ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಈ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡ ನಂತರ ಸಂಬಂಧಪಟ್ಟ ಇಲಾಖೆಯಿಂದ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ ಸೇರಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ವರ್ಗದಜರು ಹಾಜರಿದ್ದರು.