ವಿಮೋಚನೆ ಬಳಿಕ ಕಲ್ಯಾಣ ಕರ್ನಾಟಕಕ್ಕೆ ಮುಕ್ತಿ

| Published : Sep 18 2024, 01:48 AM IST

ಸಾರಾಂಶ

ದೇವದುರ್ಗ ಪಟ್ಟಣದ ಪಟೇಲ್ ಮೈದಾನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಶಾಸಕ ಕರೆಮ್ಮ ಜಿ.ನಾಯಕ ಮಾತನಾಡಿದರು.

ಕನ್ನಡಪ್ರಭ ವಾರ್ತೆ ದೇವದುರ್ಗ

ನಿಜಾಮರ ಆಡಳಿತದ ಹಾವಳಿಯಿಂದ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದ ಕಲ್ಯಾಣ ಕರ್ನಾಟಕ ಪ್ರದೇಶದ ಜನತೆಗೆ ವಿಮೋಚನಾ ಹೋರಾಟದ ಫಲವಾಗಿ ಮುಕ್ತಿದೊರಕಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ನಾಂದಿಯಾಯಿತು ಎಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

ಪಟ್ಟಣದ ಪಟೇಲ್ ಮೈದಾನದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣದ ಬಳಿಕ ಸಾರ್ವಜನಿಕ ಕ್ಲಬ್ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅನೇಕ ಹೋರಾಟಗಾರ ಶ್ರಮದಿಂದ ನಮಗೆ ಮುಕ್ತಿದೊರಕಿದ್ದು, ಎಲ್ಲಾ ಹೋರಾಟಗಾರರ ಸ್ಪೂರ್ತಿ, ಸಂದೇಶಗಳು ನಮ್ಮ ಜೀವನದದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸೀಲ್ದಾರ ಚನ್ನಮಲ್ಲಪ್ಪ ಘಂಟಿ ವಹಿಸಿದ್ದರು. ಎಪಿಎಂಸಿ ಅಧ್ಯಕ್ಷ ಆದನಗೌಡ ಪಾಟೀಲ್ ಬುಂಕಲದೊಡ್ಡಿ ಮಾತನಾಡಿದರು. ಹೋರಾಟಗಾರ ಆದಿ ರಾಜಶೇಖರಪ್ಪರವರ ಪತ್ನಿ ಆದಿ ಕಮಲಮ್ಮರನ್ನು ತಾಲೂಕು ಆಡಳಿತದ ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಲಕ್ಷ್ಮಣ ಜ್ಯೋತಿ ಸೇರಿ ನಾನಾ ಇಲಾಖೆ ಅಧಿಕಾರಿಗಳು ಇದ್ದರು.

ವಿವಿಧೆಡೆ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ಯ ಎಪಿಎಂಸಿಯಲ್ಲಿ ಅಧ್ಯಕ್ಷ ಆದನಗೌಡ ಪಾಟೀಲ್ ಬುಂಕಲದೊಡ್ಡಿ, ಟಿಎಪಿಸಿಎಂಸಿಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಶರಣಗೌಡ ಕಮತಗಿ, ವಿಎಸ್ಎಸ್ಎಸ್ಎನ್ ಅಧ್ಯಕ್ಷ ಭೀಮನಗೌಡ ಅಂಜಳ, ತಾಪಂ ಕಚೇರಿಯಲ್ಲಿ ಇಒ ಬಸವರಾಜ ಹಟ್ಟಿ, ಬಿಇಒ ಕಚೇರಿಯಲ್ಲಿ ಬಿಇಒ ಸುಖದೇವ, ಕೃಷಿ ಇಲಾಖೆ ಕಚೇರಿಯಲ್ಲಿ ಶ್ರೀನಿವಾಸ ನಾಯಕ, ಸಿಡಿಪಿಒ ಕಚೇರಿಯಲ್ಲಿ ಸಿಡಿಪಿಒ ಮಾಧವಾನಂದ ಸೇರಿ ಇತರೆ ಇಲಾಖೆ ಕಚೇರಿಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ ಧ್ವಜಾರೋಹಣ ಮಾಡಲಾಯಿತು.