ಎಂಪಿ ಆಯ್ತು, ಈಗ ರಾಜ್ಯದಲ್ಲಿ ಎಂಎಲ್‌ಸಿ ಚುನಾವಣೆ ಕಾವು

| Published : May 09 2024, 01:00 AM IST

ಎಂಪಿ ಆಯ್ತು, ಈಗ ರಾಜ್ಯದಲ್ಲಿ ಎಂಎಲ್‌ಸಿ ಚುನಾವಣೆ ಕಾವು
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಪರಿಷತ್‌ನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

- ವಿಧಾನಪರಿಷತ್‌ ಚುನಾವಣೆಗೆ ಇಂದು ಅಧಿಸೂಚನೆ

- ಪದವೀಧರ, ಶಿಕ್ಷಕರ ಕ್ಷೇತ್ರದ ತಲಾ 3 ಕ್ಷೇತ್ರಗಳಿಗೆ ಚುನಾವಣೆ

- ಜೂ.3ರಂದು ಮತದಾನ, ಜೂ.6ರಂದು ಫಲಿತಾಂಶ ಪ್ರಕಟಕನ್ನಡಪ್ರಭ ವಾರ್ತೆ ಬೆಂಗಳೂರು

ವಿಧಾನಪರಿಷತ್‌ನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.ಇದೇ ತಿಂಗಳು16ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ.ನಾರಾಯಣಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ಎಲ್.ಭೋಜೇಗೌಡ, ನೈಋತ್ಯ ಕ್ಷೇತ್ರದ ಆಯನೂರು ಮಂಜುನಾಥ್, ನೈಋತ್ಯ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿಯು ಜೂ.21ಕ್ಕೆ ಅವಧಿ ಮುಕ್ತಾಯಗೊಳ್ಳಲಿದೆ. ಆಯನೂರು ಮಂಜುನಾಥ್ ಮತ್ತು ಮರಿತಿಬ್ಬೇಗೌಡ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.