ಕನ್ನಡಪ್ರಭ ವರದಿ ಬೆನ್ನಲ್ಲೇ ಶುದ್ಧ ಕುಡಿವ ನೀರಿನ ಘಟಕ ರಿಪೇರಿ

| Published : Mar 23 2024, 01:04 AM IST

ಕನ್ನಡಪ್ರಭ ವರದಿ ಬೆನ್ನಲ್ಲೇ ಶುದ್ಧ ಕುಡಿವ ನೀರಿನ ಘಟಕ ರಿಪೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮಸ್ಥರು ನೀಡಿದ ದೂರಿನನ್ವಯ ಕನ್ನಡಪ್ರಭದಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟುನಿಂತ ಕುರಿತು ವರದಿ ಪ್ರಕಟವಾಗಿತ್ತು. ಈ ಬೆನ್ನಲ್ಲೇ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಸಂಬಂಧ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ನೀಡಿದ ದೂರಿನನ್ವಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ಕಳೆದ ಎರಡು ತಿಂಗಳಿಂದ ಕೆಟ್ಟು ನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಸಂಬಂಧಪಟ್ಟ ಅಧಿಕಾರಿಗಳು ರಿಪೇರಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಿದ್ದಾರೆ. ಪತ್ರಿಕೆಯ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.