ಮೂರೂವರೆ ದಶಕದ ಬಳಿಕ ಕಾಂಗ್ರೆಸ್ ವಶಕ್ಕೆ

| Published : Jun 07 2024, 12:34 AM IST

ಸಾರಾಂಶ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಕಾಂಗ್ರೆಸ್ ನಿಂದ ಬಿಜೆಪಿ ಕಸಿದುಕೊಂಡಿತ್ತು. ಇದೀಗ ಬಿಜೆಪಿ ತೆಕ್ಕೆಯಲ್ಲಿದ್ದ ವಿಧಾನ ಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರವನ್ನು ಕಾಂಗ್ರೆಸ್ ವಶ ಪಡಿಸಿಕೊಂಡಿರುವುದು ಕೈ ಪಾಳಯ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಕಾಂಗ್ರೆಸ್ ನಿಂದ ಬಿಜೆಪಿ ಕಸಿದುಕೊಂಡಿತ್ತು. ಇದೀಗ ಬಿಜೆಪಿ ತೆಕ್ಕೆಯಲ್ಲಿದ್ದ ವಿಧಾನ ಪರಿಷತ್ ನ ಬೆಂಗಳೂರು ಪದವೀಧರ ಕ್ಷೇತ್ರವನ್ನು ಕಾಂಗ್ರೆಸ್ ವಶ ಪಡಿಸಿಕೊಂಡಿರುವುದು ಕೈ ಪಾಳಯ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ವಿಧಾನ ಪರಿಷತ್ ಗೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರವರು ಪ್ರತಿಸ್ಪರ್ಧಿಯಾದ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಅವರನ್ನು ಸುಮಾರು .... ಮತಗಳಿಂದ ಮಣಿಸಿ ಮೇಲ್ಮನೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ಬಿಜೆಪಿ ಪಕ್ಷದ ಭದ್ರಕೋಟೆ ಆಗಿದ್ದ ಬೆಂಗಳೂರು ಪದವೀಧರ ಕ್ಷೇತ್ರ ಮೂರುವರೆ ದಶಕಗಳ ನಂತರ ಕಾಂಗ್ರೆಸ್ ಪಾಲಾಗಿದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರವರ ಸೋಲಿನಿಂದ ಕಂಗ್ಗೆಟ್ಟಿದ್ದ ಕೈ ಪಾಳಯದಲ್ಲಿ ಪರಿಷತ್ ಫಲಿತಾಂಶ ಹೊಸ ಚೈತನ್ಯ ಮೂಡಿಸಿದೆ.

ಮೈತ್ರಿ ಪಕ್ಷಗಳಿಗೆ ಮುಖಭಂಗ :

ಬೆಂಗಳೂರು ಪದವೀಧರ ಕ್ಷೇತ್ರದ ಪ್ರತಿ ಚುನಾವಣೆಯಲ್ಲಿ ಬಿಜೆಪಿ , ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ನಡೆಯುತ್ತಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ - ಜೆಡಿಎಸ್ ಮೈತ್ರಿ ಸಾಧಿಸಿ ಅ.ದೇವೇಗೌಡ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ನಿಂದ ರಾಮೋಜಿಗೌಡ ಸ್ಪರ್ಧೆ ಮಾಡಿದ್ದರು.

ಜಿದ್ದಾಜಿದ್ದಿನಿಂದ ಕೂಡಿದ್ದ ಈ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ , ನೂತನ ಸಂಸದ ಡಾ.ಸಿ.ಎನ್ . ಮಂಜುನಾಥ್ , ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣಗೌಡ ಸೇರಿದಂತೆ ಅನೇಕರು ಅ.ದೇವೇಗೌಡರ ಪರ ಮತಯಾಚನೆ ಮಾಡಿದ್ದರು.

ಇನ್ನು ಕಾಂಗ್ರೆಸ್ ನ ರಾಮೋಜಿಗೌಡ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕರು ಪ್ರಚಾರ ನಡೆಸಿದ್ದರು.

ಅಂತಿಮವಾಗಿ ರಾಮೋಜಿಗೌಡರವರು ಅ.ದೇವೇಗೌಡ ಅವರನ್ನು ಮಣಿಸುವ ಮೂಲಕ ಬಿಜೆಪಿ - ಜೆಡಿಎಸ್ ಮಿತ್ರ ಪಕ್ಷಗಳು ಮುಖಭಂಗ ಅನುಭವಿಸುವಂತೆ ಮಾಡಿದ್ದಾರೆ.

ಬಿಜೆಪಿ ಭದ್ರಕೋಟೆ ಛಿದ್ರ :

ಕಳೆದ 36 ವರ್ಷಗಳಿಂದಲೂ ಬೆಂಗಳೂರು ಪದವೀಧರರ ಕ್ಷೇತ್ರ ಬಿಜೆಪಿ ಪಕ್ಷದ ಭದ್ರಕೋಟೆ ಎನಿಸಿದೆ. 1988 ರಲ್ಲಿ ಬಿಜೆಪಿ ಹಿರಿಯ ಮುಖಂಡ ರಾಮಚಂದ್ರೇಗೌಡ ಪದವೀಧರ ಕ್ಷೇತ್ರದಿಂದ ಮೊದಲಬಾರಿಗೆ ಆಯ್ಕೆಯಾದರು. ಬಳಿಕ 1994, 2000 , 2006 ಹಾಗೂ 2012 ರ ಚುನಾವಣೆಯಲ್ಲಿ ಅವರು ಕ್ರಮವಾಗಿ 5 ಬಾರಿ ಗೆಲುವು ಸಾಧಿಸಿದ್ದರು. 2018ರಲ್ಲಿ ವಯಸ್ಸಿನ ಕಾರಣದಿಂದಾಗಿ ಬಿಜೆಪಿಯಿಂದ ರಾಮಚಂದ್ರೇಗೌಡರ ಬದಲಾಗಿ ಅ.ದೇವೇಗೌಡರನ್ನು ಕಣಕ್ಕಿಳಿಸಲಾಗಿತ್ತು. ಸತತ ಸೋಲನ್ನೇ ಕಂಡಿದ್ದ ಅ.ದೇವೇಗೌಡರು ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದರು.

2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡರವರು 16,702 ಮತ ಪಡೆದು ಕಾಂಗ್ರೆಸ್ ನ ರಾಮೋಜಿಗೌಡ (12,838) ಅವರನ್ನು 3864 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು. ಈ ಚುನಾವಣೆಯಲ್ಲಿ ರಾಮೋಜಿಗೌಡರವರು ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.ಬಾಕ್ಸ್ ..........

3ನೇ ಪ್ರಯತ್ನದಲ್ಲಿ ಖುಲಾಯಿಸಿದ ಅದೃಷ್ಟ:

ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ರಾಮೋಜಿ ಗೌಡ ಅವರ ಹೆಸರನ್ನು ಕಾಂಗ್ರೆಸ್ ಪಕ್ಷ ಕೆಲ ತಿಂಗಳ ಹಿಂದೆಯೇ ಘೋಷಣೆ ಮಾಡಿತ್ತು. ಅದಕ್ಕೂ ಮೊದಲಿನಿಂದಲೇ ಕ್ಷೇತ್ರದಲ್ಲಿ ರಾಮೋಜಿಗೌಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಕ್ಷೇತ್ರದಲ್ಲಿ ಅನೇಕ ಸಭೆಗಳನ್ನು ನಡೆಸುವ ಜೊತೆಗೆ ತಮ್ಮ ಪ್ರಚಾರ ಕಾರ್ಯ ನಡೆಸಿದ್ದರು.

2012 ಮತ್ತು 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಿತರಾಗಿದ್ದ ರಾಮೋಜಿಗೌಡ ಇದೀಗ ಮೂರನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರು. ಕಳೆದ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಸ್ಪರ್ಧೆಯೊಡ್ಡಿದ್ದರಾದರೂ ಬಿಜೆಪಿಯ ಅ.ದೇವೇಗೌಡ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ರಾಮೋಜಿಗೌಡ ಗೆಲುವು ಸಾಧಿಸುವುದಲ್ಲಿ ಯಶಸ್ವಿಯಾಗಿದ್ದಾರೆ.

6ಕೆಆರ್ ಎಂಎನ್ 8.ಜೆಪಿಜಿ

ರಾಮೋಜಿಗೌಡ.