ಇಲ್ಲಿನ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶಿಕ್ಷಣ ಮತ್ತು ಕೈಗಾರಿಕೆಗಳ ನಡುವೆ ಶೈಕ್ಷಣಿಕ - ಔದ್ಯಮಿಕ ಸಹಯೋಗಕ್ಕಾಗಿ ಬೆಂಗಳೂರಿನ ಅರ್ಹಿತಾ ಅಗ್ರೋಬೋಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಇತ್ತೀಚಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ.
ಕಾಪು: ಇಲ್ಲಿನ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶಿಕ್ಷಣ ಮತ್ತು ಕೈಗಾರಿಕೆಗಳ ನಡುವೆ ಶೈಕ್ಷಣಿಕ - ಔದ್ಯಮಿಕ ಸಹಯೋಗಕ್ಕಾಗಿ ಬೆಂಗಳೂರಿನ ಅರ್ಹಿತಾ ಅಗ್ರೋಬೋಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ಇತ್ತೀಚಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ.
ಅತ್ಯಾಧುನಿಕ ಕೃಷಿ ತಂತ್ರಜ್ಞಾನ, ಸ್ವಯಂಚಾಲಿತ ವ್ಯವಸ್ಥೆ ಮತ್ತು ರೊಬೋಟಿಕ್ಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅರ್ಹಿತಾ ಅಗ್ರೋಬೋಟ್ ಸಂಸ್ಥೆಯು, ಬುದ್ಧಿವಂತ ಹಾಗೂ ಸುಸ್ಥಿರ ಕೃಷಿ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ಪರಿಣತಿಯನ್ನು ಹೊಂದಿದೆ.ಈ ಒಡಂಬಡಿಕೆಯು ಬೋಧನೆ, ಕಲಿಕೆ, ಸಂಶೋಧನೆ ಮತ್ತು ಸುಧಾರಿತ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಿಕೆಯಲ್ಲಿ ದೀರ್ಘಕಾಲೀನ ಸಹಕಾರಕ್ಕಾಗಿ ಒಂದು ಸಮಗ್ರ ಚೌಕಟ್ಟನ್ನು ಸೃಷ್ಟಿಸುತ್ತದೆ. ಅಲ್ಲದೆ ಇದು ಇಂಟರ್ನ್‌ಶಿಪ್‌ಗಳು, ಕೈಗಾರಿಕಾ ತರಬೇತಿ ಕಾರ್ಯಕ್ರಮಗಳು, ತಾಂತ್ರಿಕ ಕಾರ್ಯಾಗಾರಗಳು ಮತ್ತು ಪರಿಣಿತರ ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ವಿಶೇಷ ಕೌಶಲ್ಯಾಭಿವೃದ್ಧಿಗೆ ಪೂರಕ ವಾತಾವರಣವನ್ನು ಕಲ್ಪಿಸುತ್ತದೆ ಎಂದು ಕಾಲೇಜು ತಿಳಿಸಿದೆ.