ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ದೂರ ದೃಷ್ಟಿ ಹೊಂದಿದೆ : ನಂಜಾವಧೂತ ಶ್ರೀ

| Published : Jan 15 2025, 12:48 AM IST

ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ದೂರ ದೃಷ್ಟಿ ಹೊಂದಿದೆ : ನಂಜಾವಧೂತ ಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಕಳಸ ಪೂಜೆ ನೆರವೇರಿಸಿ ಮಾತನಾಡಿದರು.

ಕನ್ನಡ ಪ್ರಭ ವಾರ್ತೆ ಶಿರಾ

ರೈತರ ಆರ್ಥಿಕ ಅಭಿವೃದ್ಧಿಗೆ ನೂತನ ತಾಂತ್ರಿಕತೆ ಕೃಷಿ ಆಧಾರ ಎಂಬ ದೂರದೃಷ್ಟಿಯ ಕಲ್ಪನೆಯೊಂದಿಗೆ 22 ವರ್ಷಗಳಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಆಯೋಜನೆ ಮಾಡಿ ಅನ್ನದಾತರಿಗೆ ಕಡಿಮೆ ನೀರಿನ ಪ್ರಮಾಣದಲ್ಲಿ ಹೆಚ್ಚು ಆರ್ಥಿಕ ಲಾಭ ನೀಡುವ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸುತ್ತಿರುವ ಕಾರಣ ಸಾಕಷ್ಟು ರೈತರ ಬದಲಾವಣೆಯಾಗಿದೆ, ಇದು ನಮ್ಮ ಶ್ರೀಮಠವು ಸದಾ ರೈತಪರವಾಗಿರುವುದಕ್ಕೆ ಸಾಕ್ಷಿ ಎಂದು

ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥಕ್ಕೆ ಕಳಸ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಕಳಸ ಪೂಜೆ ನೆರವೇರಿಸಿ ಮಾತನಾಡಿದರು.

ಈ ದಿನ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಕಳಸ ಪ್ರತಿಷ್ಠಾಪನೆ ಪೂಜೆ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದ್ದೇವೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜ.19ರಂದು ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲು ಗಾಲಿ ರಥೋತ್ಸವ ನಡೆಯಲಿದ್ದು, 22ನೇ ವರ್ಷದ ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ಕೂಡ ಉದ್ಘಾಟನೆಗೊಳ್ಳಲಿದೆ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀ ಓಂಕಾರೇಶ್ವರ ಸ್ವಾಮಿಯ ಕೃಪಾ ಕಟಾಕ್ಷ ಪಡೆಯಬೇಕು ಎಂದು ಮನವಿ ಮಾಡಿದರು.

ಅಲ್ಲದೆ ಜ. 20 ರಿಂದ 25ರವರೆಗೆ ವಿವಿಧ ಇಲಾಖೆಗಳ ಕಾರ್ಯಾಗಾರ, ರೈತ ಸಮಾವೇಶ, ಮಹಿಳಾ ಸಮಾವೇಶ, ವಿಜ್ಞಾನ ಮೇಳ, ಸಾಂಸ್ಕೃತಿಕ ಉತ್ಸವಗಳು ನಡೆಯಲಿದ್ದು , ಪ್ರತಿನಿತ್ಯ ಶ್ರೀಮಠದಲ್ಲಿ ಧಾರ್ಮಿಕ ಉತ್ಸವಗಳು ಕೂಡ ಜರುಗಲಿವೆ.

ಇಂತಹ ಉತ್ಸವಗಳಲ್ಲಿ ರೈತ ಮತ್ತು ಜನಸಾಮಾನ್ಯರು ಹಾಗೂ ಮಹಿಳೆಯರು ಪಾಲ್ಗೊಂಡು ಸರ್ಕಾರದ ಯೋಜನೆಗಳ ಅಗತ್ಯವಾದ ಮಾಹಿತಿಯನ್ನು ಪಡೆಯುವುದರ ಜೊತೆಗೆ ಸಾಂಸ್ಕೃತಿಕ ಉತ್ಸವಗಳಲ್ಲಿ ಪಾಲ್ಗೊಳ್ಳಬೇಕು. ಶ್ರೀ ಓಂಕಾರೇಶ್ವರ ಸ್ವಾಮಿಯ ಕೃಪಾಕಟಾಕ್ಷ ಸದಾ ನಿಮ್ಮ ಮೇಲೆ ಇರಲಿದೆ ಎಂದರು.

ಮುಖಂಡ ನಿರಂಜನ್ ,ನಾದೂರು ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯಕುಮಾರ್, ಮಂಜುನಾಥ ಸ್ವಾಮಿ, ನಿವೃತ್ತ ಶಿಕ್ಷಕ ರಂಗಸ್ವಾಮಿ, ಮೆಡಿಕಲ್ ಉಮೇಶ್, ಮಂಜುನಾಥ ಗುಪ್ತ, ವೆಂಕಟೇಶ್ , ಸಿದ್ದನಹಳ್ಳಿ ಗಿರೀಶ್ , ಶ್ರೀನಿವಾಸ್ , ಕುಮಾರ್ , ಶಿವಣ್ಣ , ಲೋಕೇಶ್ ಸೇರಿದಂತೆ ಹಲವಾರು ಇದ್ದರು.