ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಗಳು: ಮಲ್ಲಿಕಾರ್ಜುನ್

| Published : Aug 09 2024, 12:35 AM IST

ಸಾರಾಂಶ

ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳಲ್ಲಿ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಸಬಲರಾಗಬಹುದು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ರೈತರ ಜೀವನಾಡಿಯಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಮಾಜ ಸೇವಕ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಪಟ್ಟಣದ ಜಯನಗರ ಬಡಾವಣೆಯ ತಮ್ಮ ಕಚೇರಿಯಲ್ಲಿ ತಾಲೂಕಿನ ಅಲಂಬಾಡಿಕಾವಲು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷೆ ಆಶಾ ದೇವರಾಜು ಹಾಗೂ ಸೋಮನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂಗಾಪುರ ಸಿದ್ದೇಗೌಡರನ್ನು ಅಭಿನಂದಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳಲ್ಲಿ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಜನರು ಆರ್ಥಿಕವಾಗಿ ಸಬಲರಾಗಬಹುದು ಎಂದರು.

ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಇದ್ದರೂ ರೈತರು ಕೃಷಿಯನ್ನೇ ಅವಲಂಭಿಸಿದ್ದಾರೆ. ಸಹಕಾರ ಸಂಘಗಳಲ್ಲಿ ಅರ್ಹ ರೈತರಿಗೆ ಶೂನ್ಯ ಬಡ್ಡಿ ದರಲ್ಲಿ ಸಾಲ ದೊರೆಯುತ್ತದೆ. ಈ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಬೇಕು. ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಯಾವುದೇ ಕಾರಣಕ್ಕೂ ಸಾಲ ಪಡೆದುಕೊಳ್ಳಬಾರದು ಎಂದು ಸಲಹೆ ನೀಡಿದರು.

ಸಂಘದ ಚುನಾಯಿತ ಪ್ರತಿನಿಧಿಗಳು ತಮ್ಮ ಪ್ರಾಮಾಣಿಕ ಪರಿಶ್ರಮದಿಂದ ಸಂಘದ ಅಭಿವೃದ್ದಿಗೆ ದುಡಿಯಬೇಕು ಎಂದು ಕಿವಿಮಾತು ಹೇಳಿದರು.

ಈ ವೇಳೆ ಸಂಘದ ನಿರ್ದೇಶಕರಾದ ರಾಜೇಗೌಡ, ಸೋಮನಹಳ್ಳಿ,ಬೋಜರಾಜು, ಶಿವಪ್ಪ, ಗ್ರಾಮ ಪಂಚಾಯತಿ ಸದ್ಯಸ ಎ.ರಾಜು, ಮಾಜಿ ಅಧ್ಯಕ್ಷ ಶ್ರೀನಿವಾಸ್, ಮುಖಂಡರುಗಳಾದ ದೇವರಾಜೇಗೌಡ, ಸೋಮಣ್ಣ, ಸುರೇಶ್, ಅಣ್ಣೇಗೌಡ, ಸಂಗಾಪುರ ಸುರೇಂದ್ರ ಸೇರಿದಂತೆ ಉಪಸ್ಥಿತರಿದ್ದರು.