ಪ್ರದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿ, ಮಿಶ್ರ ಬೆಳೆ ಪದ್ಧತಿ, ಅಂತರ ಬೆಳೆ ಪದ್ಧತಿ, ಮೇವಿನ ಬೆಳೆಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ಅಂಗಾಂಶ ಕೃಷಿ, ರೇಷ್ಮೆ ಕೃಷಿ, ಅಣಬೆ ಬೇಸಾಯ, ಜೇನು ಸಾಕಣೆ ಮತ್ತು ಮೇವು ಸಂರಕ್ಷಣೆ ಕುರಿತು ಮಾಹಿತಿ ನೀಡಲಾಯಿತು. ವಿವಿಧ ಬೆಳೆಗಳ ತಳಿಗಳು, ಬಿತ್ತನೆ ವಿಧಾನ, ಗೊಬ್ಬರ ನಿರ್ವಹಣೆ ಹಾಗೂ ಇಳುವರಿಯ ವಿವರಗಳನ್ನು ಮಾಹಿತಿ ಫಲಕಗಳ ಮೂಲಕ ಪ್ರದರ್ಶಿಸಲಾಯಿತು. ಸುಮಾರು ೧೦೦ ರೈತರು ಪ್ರದರ್ಶನದಲ್ಲಿ ಪಾಲ್ಗೊಂಡು ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ಹಾಗೂ ಕೃಷಿ ಮಹಾವಿದ್ಯಾಲಯ, ಕಾರೇಕೆರೆ, ಹಾಸನದ ವತಿಯಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ಅಂಕುರ ಕೃಷಿ ವಸ್ತು ಪ್ರದರ್ಶನ-೨೦೨೬ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಹಾಸನ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಯೋಗೇಶ್ ಉದ್ಘಾಟಿಸಿದರು. ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರಮೇಶ್ ಕುಮಾರ್, ಪಿಐ ಇಂಡಸ್ಟ್ರೀಸ್‌ನ ವಲಯ ವ್ಯವಸ್ಥಾಪಕ ರಮೇಶ್ ಕುಮಾರ್, ಕಾರ್ಯಕ್ರಮದ ಸಂಯೋಜಕಿ ಡಾ. ಶಶೀಕಲಾ ಎಸ್. ಜಿ. ಹಾಗೂ ಕತ್ತರಿಘಟ್ಟ ಗ್ರಾಮದ ಸಹ ಸಂಯೋಜಕ ಡಾ. ಗಣೇಶ್ ಪ್ರಸಾದ್ ಟಿ. ಎಸ್. ಸೇರಿದಂತೆ ಕೃಷಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಪ್ರದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿ, ಮಿಶ್ರ ಬೆಳೆ ಪದ್ಧತಿ, ಅಂತರ ಬೆಳೆ ಪದ್ಧತಿ, ಮೇವಿನ ಬೆಳೆಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ಅಂಗಾಂಶ ಕೃಷಿ, ರೇಷ್ಮೆ ಕೃಷಿ, ಅಣಬೆ ಬೇಸಾಯ, ಜೇನು ಸಾಕಣೆ ಮತ್ತು ಮೇವು ಸಂರಕ್ಷಣೆ ಕುರಿತು ಮಾಹಿತಿ ನೀಡಲಾಯಿತು. ವಿವಿಧ ಬೆಳೆಗಳ ತಳಿಗಳು, ಬಿತ್ತನೆ ವಿಧಾನ, ಗೊಬ್ಬರ ನಿರ್ವಹಣೆ ಹಾಗೂ ಇಳುವರಿಯ ವಿವರಗಳನ್ನು ಮಾಹಿತಿ ಫಲಕಗಳ ಮೂಲಕ ಪ್ರದರ್ಶಿಸಲಾಯಿತು. ಸುಮಾರು ೧೦೦ ರೈತರು ಪ್ರದರ್ಶನದಲ್ಲಿ ಪಾಲ್ಗೊಂಡು ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆದರು.

ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ವಸತಿ, ಆಹಾರ ಮತ್ತು ಇತರ ಸೌಲಭ್ಯಗಳನ್ನು ಒದಗಿಸಿ ಸಹಕರಿಸಿದ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ೧೮ ಗ್ರಾಮಸ್ಥರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಭಾಗವಹಿಸಿದ ರೈತರು ಮತ್ತು ಗ್ರಾಮಸ್ಥರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಅಂಕುರ ಕೃಷಿ ಮೇಳವು ರೈತರಿಗೆ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ಅರಿವು ಮೂಡಿಸುವುದರ ಜೊತೆಗೆ ಕೃಷಿ ಮಹಾವಿದ್ಯಾಲಯ ಮತ್ತು ರೈತ ಸಮುದಾಯದ ನಡುವಿನ ಬಾಂಧವ್ಯವನ್ನು ಬಲಪಡಿಸಿತು.