ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ನಗರಕೆರೆ ಗ್ರಾಪಂ ಎದುರು ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.ಸಂಘದ ಪದಾಧಿಕಾರಿಗಳು ಗ್ರಾಪಂ ಎದುರು ಆಗಮಿಸಿ ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕೂಲಿಕಾರರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಸರ್ಕಾರ ಕೂಲಿಕಾರರಿಗೆ ಸರಿಯಾದ ವೇತನ ನೀಡದೆ ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇರಳ ಮತ್ತು ತಮಿಳುನಾಡು ಮಾದರಿಯಲ್ಲಿ ಕೃಷಿ ಕೂಲಿಕಾರರಿಗೆ ಮತ್ತು ಗ್ರಾಮೀಣ ಕೆಲಸಗಾರರಿಗೆ ನೀಡುವ ರೀತಿಯಲ್ಲಿ ವೇತನ, ತುಟ್ಟಿ ಭತ್ಯೆ, ಇಎಸ್ಐ, ಭವಿಷ್ಯನಿಧಿ, ನಿವೃತ್ತಿವೇತನ ಮುಂತಾದ ಸವಲತ್ತುಗಳನ್ನು ನೀಡಬೇಕೆಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ಕೂಲಿಗಾರರಿಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೃಷಿ ಕೂಲಿಕಾರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಟಿ.ಪಿ.ಅರುಣ್ ಕುಮಾರ್ , ಪದಾಧಿಕಾರಿಗಳಾದ ರಾಜಮ್ಮ, ಬಸವಲಿಂಗಮ್ಮ, ಜಯಲಕ್ಷ್ಮಿ, ರಂಜಿತ, ಸೌಂದರ್ಯ, ರಾಜಣ್ಣ, ಕಮಲಮ್ಮ, ಶಿಲ್ಪ, ಮಾಲತಿ ಸೇರಿದಂತೆ ಹಲವರಿದ್ದರು.ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಮಳವಳ್ಳಿ:ಮಂಡ್ಯದಲ್ಲಿ ನಡೆದ ಪ್ರೌಢಶಾಲಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ರಸಪ್ರಶ್ನೆ ಸ್ಪರ್ಧೆ ವಿಭಾಗದಲ್ಲಿ ತಾಲೂಕಿನ ವಡ್ಡರಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳಾದ ಎಚ್.ವಿ.ಹೇಮಾ ಮತ್ತು ಜಿ.ಭೂಮಿಕಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರನ್ನು ಪ್ರಾಂಶುಪಾಲ ಎಂ.ಶಿವಕುಮಾರ್, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮಂಡ್ಯ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು, ಧಾರವಾಡ ಮತ್ತು ಕಲಬುರುಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಕಾರಣಾಂತರಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.