ಶೀಘ್ರ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಕಾಲೇಜು: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌

| Published : Nov 06 2025, 02:00 AM IST

ಶೀಘ್ರ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಕಾಲೇಜು: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌
Share this Article
  • FB
  • TW
  • Linkdin
  • Email

ಸಾರಾಂಶ

ಕೃಷಿ ಮತ್ತು ತೋಟಗಾರಿಕೆ ಕಾಲೇಜುಗಳನ್ನು ಬಾಪೂಜಿ ವಿದ್ಯಾಸಂಸ್ಥೆಯಿಂದ ಆರಂಭಿಸುತ್ತಿದ್ದು, ಈ ಭಾಗದ ರೈತರು, ಗ್ರಾಮೀಣರ ಬಹು ವರ್ಷಗಳ ಕನಸು ಸಾಕಾರಗೊಳ್ಳುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ, ಬಾಪೂಜಿ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೃಷಿ ಮತ್ತು ತೋಟಗಾರಿಕೆ ಕಾಲೇಜುಗಳನ್ನು ಬಾಪೂಜಿ ವಿದ್ಯಾಸಂಸ್ಥೆಯಿಂದ ಆರಂಭಿಸುತ್ತಿದ್ದು, ಈ ಭಾಗದ ರೈತರು, ಗ್ರಾಮೀಣರ ಬಹು ವರ್ಷಗಳ ಕನಸು ಸಾಕಾರಗೊಳ್ಳುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ, ಬಾಪೂಜಿ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದರು.

ನಗರದ ಜೆಜೆಎಂ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಕಾಲೇಜು ಸ್ಥಾಪಿಸಲು ಅ.31ರಂದು ಬಾಪೂಜಿ ವಿದ್ಯಾಸಂಸ್ಥೆಗೆ ಅನುಮತಿ ಸಿಕ್ಕಿದ್ದು, ಇದರಿಂದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಕೈಗೊಳ್ಳಲು, ರೈತರಿಗೂ ಅನುಕೂಲವಾಗಲಿದೆ ಎಂದರು.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾನಿಲಯದ ಸಂಯೋಜನೆಯಡಿ ಬಾಪೂಜಿ ವಿದ್ಯಾಸಂಸ್ಥೆಯಿಂದ ಎಸ್ಎಸ್‌ ಇನ್ಸಟಿಟ್ಯೂಟ್ ಆಫ್ ಅಗ್ರಿಕಲ್ಚಲರ್‌ ಅಂಡ್ ಹಾರ್ಟಿಕಲ್ಚರಲ್ ಸೈನ್ಸ್ ಕಾಲೇಜು ಆರಂಭಿಸಲಿದ್ದು, ಕಾಲೇಜಿನಲ್ಲಿ ರೈತರ ಮಕ್ಕಳಿಗೆ, ಗ್ರಾಮೀಣ ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಕೃಷಿಗೆ ಸಾಕಷ್ಟು ಭವಿಷ್ಯವಿದ್ದು, ಇದರಿಂದ ಆರ್ಥಿಕತೆಯೂ ಅಭಿವೃದ್ಧಿಯಾಗಲಿದೆ ಎಂದರು.

ಬಾಪೂಜಿ ವಿದ್ಯಾಸಂಸ್ಥೆಯಡಿ ನೂತನ ಕೃಷಿ ಮತ್ತು ತೋಟಗಾರಿಕೆ ಕಾಲೇಜು ಆರಂಭವಾಗಲಿದೆ. ಈಗಾಗಲೇ ಕಾಲೇಜಿಗೆ ಅಗತ್ಯವಾದ ಭೂಮಿಯನ್ನೂ ಸಹ ಎಸ್ಸೆಸ್ ಹೈಟೆಕ್ ಆಸ್ಪತ್ರೆ ಸಮೀಪ ನಿಗದಿಪಡಿಸಿದೆ. ಸಿಇಟಿ ಮೂಲಕ ಶೇ.60 ಸೀಟುಗಳು, ಮ್ಯಾನೇಜ್‌ಮೆಂಟ್‌ಗೆ ಶೇ.40ರಷ್ಟು ಸೀಟುಗಳನ್ನು ನಿಗದಿಪಡಿಲಾಗಿದೆ ಎಂದರು.

ವಿವಿ ಕುಲ ಸಚಿವ ಪ್ರೊ.ಬಕ್ಕಪ್ಪ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಪಂ ಸಿಇಓ ಗಿತ್ತೆ ವಿಠಲರಾವ್ ಮಾಧವರಾವ್, ಪಾಲಿಕೆ ಆಯುಕ್ತೆ ರೇಣುಕಾ, ಮಾಜಿ ಮೇಯರ್ ಕೆ.ಚಮನ್ ಸಾಬ್‌, ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್‌, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರ ಗಿರೀಶ, ಪಾಲಿಕೆ ವಿಪಕ್ಷದ ಮಾಜಿ ನಾಯಕ ಜಿ.ಎಸ್.ಮಂಜುನಾಥ ಗಡಿಗುಡಾಳ್, ಮಾಗಾನಹಳ್ಳಿ ಬಿ.ಕೆ.ಪರಶುರಾಮ, ಬೂದಾಳ ಬಾಬು ಇತರರು ಇದ್ದರು.