ಕೃಷಿ ಇಲಾಖೆ ಸಿಬ್ಬಂದಿ ನೇಮಕ ಅರ್ಜಿ ಆಹ್ವಾನ

| Published : Jun 25 2025, 11:47 PM IST

ಸಾರಾಂಶ

ಸೀಮಿತ ಅವಧಿಗೆ ವಿರಾಜಪೇಟೆ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜು. 5ರೊಳಗೆ ಅರ್ಜಿ ಸಲ್ಲಿಸಬಹುದು.

ಮಡಿಕೇರಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ(ಆತ್ಮ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫೀಸ್‍ನಲ್ಲಿ ಪರಿಣತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ 30 ಸಾವಿರ ರು. ಗೌರವ ಧನ ನೀಡಲಾಗುವುದು. ಈ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜು. 5 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.