ಸೋಮನಳಮ್ಮ ದೇವಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಶೇಷ ಪೂಜೆ ಸಲ್ಲಿಕೆ

| Published : Feb 23 2025, 12:30 AM IST

ಸೋಮನಳಮ್ಮ ದೇವಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಶೇಷ ಪೂಜೆ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ನಾಗಮಂಗಲ ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಸೋಮನಳಮ್ಮದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಬೆಳಗ್ಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಸಚಿವರನ್ನು ಪ್ರಧಾನ ಅರ್ಚಕ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಅತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು ದೇವಿಗೆ ಭಕ್ತಿ ನಮನ ಸಲ್ಲಿಸಿ ಆಶೀರ್ವಾದ ಪಡೆದುಕೊಂಡ ಬಳಿಕ ಕ್ಷೇತ್ರದ ಶ್ರೀ ಕೋಟೆಮಾರಮ್ಮದೇವಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಸಚಿವರು, ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳದೆ ದೇವಿಗೆ ಪೂಜೆಯೊಂದಿಗೆ ತಮ್ಮ ಭಕ್ತಿ ಭಾವ ಸಲ್ಲಿಸಿ ಆಶೀರ್ವಾದ ಪಡೆದು ಸುರಕ್ಷಿತವಾಗಿ ತೆರಳಬೇಕು ಎಂದು ತಿಳಿಸಿದರು. ನಂತರ ನೆರೆದಿದ್ದ ಭಕ್ತರಿಗೆ ಸಚಿವರು ಪ್ರಸಾದ ವಿತರಿಸಿದರು.

ಈ ವೇಳೆ ಸಚಿವರ ಪುತ್ರ ಸಚ್ಚಿನ್, ಮುಖಂಡರಾದ ಸುನಿಲ್ ಲಕ್ಷ್ಮಿಕಾಂತ್, ಚಿಣ್ಯ ವೆಂಕಟೇಶ್, ಆರ್.ಕೃಷ್ಣೇಗೌಡ, ಟ್ರಸ್ಟ್‌ನ ಪದಾಧಿಕಾರಿಗಳಾದ ಹೊಣಕೆರೆ ಬಲರಾಮೇಗೌಡ, ಅಲ್ಪಹಳ್ಳಿ ನಾಗಣ್ಣ, ವಡ್ಡರಹಳ್ಳಿ ಸಣ್ಣಪ್ಪ, ಗಂಗನಹಳ್ಳಿ ಧನಂಜಯ, ಚಿಣ್ಯ ಪ್ರಕಾಶ್, ತುಳಸಿರಾಂ ಅರ್ಚಕರಾದ ಸುಧೀರ್ ಮತ್ತು ಪ್ರಕಾಶ್ ಸೇರಿದಂತೆ ಹಲವರು ಇದ್ದರು.