ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ

| Published : Mar 19 2024, 12:49 AM IST

ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ನಾಗಮಂಗಲವಿಧಾನಸಭಾ ಚುನಾವಣೆ ಸೋಲಿನಿಂದ ಹತಾಶರಾಗಿರುವ ಮಾಜಿ ಶಾಸಕ ಸುರೇಶ್‌ಗೌಡರು ಪದೇ ಪದೇ ಕೃಷಿ ಸಚಿವ ಎನ್.ಚಲುವರಾಯಸ್ವಾಮಿರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುವುದನ್ನು ಮುಂದುವರಿಸಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ಎಚ್ಚರಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ ಎಂದು ಜರಿದರು.

ಚುನಾವಣೆ ವೇಳೆ ಯಾವ ರೀತಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ ಮತ್ತು ಎಂಎಲ್‌ಸಿ ದಿನೇಶ್‌ಗೂಳಿಗೌಡರನ್ನು ಕೇಳಿದರೆ ಮಾಜಿ ಶಾಸಕ ಸುರೇಶ್‌ಗೌಡರ ನಿಜ ಬಣ್ಣ ಬಯಲಾಗುತ್ತದೆ ಎಂದರು.

ಎರಡು ಬಾರಿ ಶಾಸಕರಾಗಿ ಆಯ್ಕೆಯಾದರೂ ಸಹ ತಾಲೂಕಿನಲ್ಲಿ ಶಾಶ್ವತವಾಗಿ ಉಳಿಯುವ ಯಾವುದೇ ಅಭಿವೃದ್ಧಿ ಕೆಲಸ ಮಾಡಲಾಗದಿದ್ದರೂ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ನಾಮಬಲದಲ್ಲಿ ರಾಜಕಾರಣ ಮಾಡುತ್ತಿರುವ ಇವರಿಗೆ ಸಚಿವ ಎನ್.ಚಲುವರಾಯಸ್ವಾಮಿ ಅವರ ಬಗ್ಗೆ ಮಾತನಾಡಲು ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದರು.

ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್‌ ರಾಮಣ್ಣ ಮಾತನಾಡಿ, ಶಾಸಕರಾಗಿದ್ದಾಗ ಸುರೇಶ್‌ಗೌಡರ ದುರಾಡಳಿತದಿಂದ ಬೇಸತ್ತು ಜನರು ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಪಟ್ಟಣದಲ್ಲಿ ಸೂಪರ್‌ಮಾರ್ಕೆಟ್ ವಾಣಿಜ್ಯ ಮಳಿಗೆ ಕಟ್ಟಡ ನಿರ್ಮಾಣವಾಗಿ 10 ವರ್ಷ ಕಳೆದರೂ ಟೆಂಡರ್ ಮಾಡಿಸಲು ಆಗಿರಲಿಲ್ಲ ಎಂದು ಟೀಕಿಸಿದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳ ಒದಗಿಸಲು ಆಗಿರಲಿಲ್ಲ. ಚಲುವರಾಯಸ್ವಾಮಿ ಅವರು ಗೆದ್ದು ಸಚಿವರಾಗುತ್ತಿದ್ದಂತೆ ಇವೆಲ್ಲವನ್ನೂ ಮಾಡಿದ್ದಾರೆ. ಇದನ್ನು ಸಹಿಸಲಾಗದೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸುರೇಶ್‌ಗೌಡರು ಇನ್ನಾದರೂ ಬುದ್ಧಿ ಕಲಿಯಬೇಕು ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಸಿ.ಚೇತನ್‌ಕುಮಾರ್ ಮಾತನಾಡಿ, ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಸಲ್ಲದ ಹೇಳಿಕೆ ನೀಡುವ ಮೂಲಕ ಮಾಜಿ ಶಾಸಕ ಸುರೇಶ್‌ಗೌಡ ತಮ್ಮ ಗೌರವನ್ನು ತಾವೇ ಕಳೆದುಕೊಳ್ಳುತ್ತಿದ್ದು, ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು.