ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ನಾಯಕರಾಗಿದ್ದಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯವರು ಮುಡಾ ಹಗರಣದ ನೆಪ ಮಾಡಿ ಹೋರಾಟ ನಡೆಸುವ ಮೂಲಕ ಘನತೆಗೆ ಧಕ್ಕೆ ತರುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ರಾಜ್ಯದ ಎಲ್ಲ ಹಿಂದುಳಿದ ಅಹಿಂದ ವರ್ಗದವರು ಸೇರಿ ಬಿಜೆಪಿ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಗೋವಾ ಕನ್ನಡಿಗರ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ಮೇಟಿ ಎಚ್ಚರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ನಾಯಕರಾಗಿದ್ದಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯವರು ಮುಡಾ ಹಗರಣದ ನೆಪ ಮಾಡಿ ಹೋರಾಟ ನಡೆಸುವ ಮೂಲಕ ಘನತೆಗೆ ಧಕ್ಕೆ ತರುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ರಾಜ್ಯದ ಎಲ್ಲ ಹಿಂದುಳಿದ ಅಹಿಂದ ವರ್ಗದವರು ಸೇರಿ ಬಿಜೆಪಿ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಗೋವಾ ಕನ್ನಡಿಗರ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ಮೇಟಿ ಎಚ್ಚರಿಸಿದ್ದಾರೆ.ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ರಾಮಯ್ಯನವರು ಕಳೇದ 40 ವರ್ಷಗಳಿಂದ ರಾಜಕೀಯದಲ್ಲಿದ್ದು, ಹಲವಾರು ಹುದ್ದೆಗಳನ್ನು ಅಲಂಕರಿಸಿ ಒಂದು ಕಪ್ಪುಚುಕ್ಕೆ ಇಲ್ಲದಂತೆ ಆಡಳಿತ ನೀಡಿದ್ದಾರೆ. ಆದರೆ, ಬಿಜೆಪಿಯವರು ಪ್ರಬಲ ಕುರುಬ ಸಮಾಜದ ಆರ್‌ಎಸ್‌ಎಸ್ ಗರಡಿಯಲ್ಲಿ ಬೆಳೆದು ಬಂದ ಕೆ.ಎಸ್.ಈಶ್ವರಪ್ಪನವರೂ ಕೂಡ ಹಿಂದುಳಿದವರು ಎಂಬ ಕಾರಣಕ್ಕೆ ಅವರ ಮಗನಿಗೆ ಟಿಕೆಟ್ ನೀಡಲಿಲ್ಲ. ಬಿಜೆಪಿಯವರು ತಮ್ಮ ಅಧಿಕಾರದಲ್ಲಿದ್ದಾಗ ಬಿ.ಎಸ್.ಯಡಿಯೂರಪ್ಪನವರು ಸೇರಿ ಅನೇಕ ಬಿಜೆಪಿಯವರು ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದಿದ್ದನ್ನು ಮರೆತು ಬಿಟ್ಟಿದ್ದಾರೆ. ತಮ್ಮ ಭ್ರಷ್ಟಾಚಾರ ಗೊತ್ತಾಗಬಾರದು ಎಂದು ಮುಡಾ ಹಗರಣ ಮುಂದಿಟ್ಟು ಹೋರಾಟ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
ಮುಖ್ಯಮಂತ್ರಿ ಸಿದ್ರಾಮಯ್ಯನವರ ಪತ್ನಿಗೆ ಅವರ ಸಹೋದರ ಉಡುಗೊರೆಯಾಗಿ ಕೊಟ್ಟಿದ್ದು, ಈ ಮುಡಾ ಹಗರಣದಲ್ಲಿ ಬಿಜೆಪಿಯವರು ಹಾಗೂ ಜೆಡಿಎಸ್ ನವರಿಗೂ ನಂಟಿದೆ ಎಂಬ ವದಂತಿಗಳು ಮಾಧ್ಯಮಗಳಿಂದ ತಿಳಿದಿದೆ. ಅದೇನೆ ಆಗಲಿ ಸದ್ಯ ರಾಜ್ಯ ಸರ್ಕಾರ ಮುಡಾ ತನಿಖೆ ಕೈಗೊಂಡಿದ್ದು, ತನಿಖೆ ಬಳಿಕ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.