ಕನ್ನಡಪ್ರಭ ವಾರ್ತೆ ಕಲಬುರಗಿ/ಹುಬ್ಬಳ್ಳಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಜನವರಿ 21ರಂದು ಹುಬ್ಬಳ್ಳಿಯಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲು ದಲಿತ ಸಂಘಟನೆಗಳು ಮುಂದಾಗಿವೆ. ಮೈಸೂರಿನಲ್ಲಿ ಜ.25ರಂದು ಬೃಹತ್ ಅಹಿಂದ ಸಮಾವೇಶ ಆಯೋಜನೆಯಾಗಿದ್ದು, ಅದಕ್ಕಿಂತಲೂ ಮೊದಲೇ ಹುಬ್ಬಳ್ಳಿಯಲ್ಲಿ ಸಮಾವೇಶ ಆಯೋಜಿಸಲು ದಲಿತ ಸಂಘಟನೆಗಳು ಮುಂದಾಗಿವೆ.

ಈ ಸಂಬಂಧ ಕಲಬುರಗಿಯಲ್ಲಿ ಶನಿವಾರ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಅಹಿಂದ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಸಿದ್ದಣ್ಣ ತೇಜಿ, ಉತ್ತರ ಕರ್ನಾಟಕದ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬೆಂಬಲವಾಗಿ ಈ ಸಮಾವೇಶ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಕಾಂಗ್ರೆಸ್ ಸರ್ವನಾಶ ಆಗುವುದು ಖಂಡಿತ ಎಂದರು.

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು. ಒಂದು ವೇಳೆ ಬದಲಾಯಿಸಿದರೆ ಅಹಿಂದ ಸಮುದಾಯ ಕಾಂಗ್ರೆಸ್ ನಿರ್ನಾಮಕ್ಕೆ ಹೋರಾಟ ಮಾಡಬೇಕಾಗುತ್ತದೆ. ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಲು ಮುಂದಾದರೆ ಸುಮ್ಮನೇ ಕೈಕಟ್ಟಿ ಕೂಡೋದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.