ಸಾರಾಂಶ
ಅಹಮದಾಬಾದ್‌ನ ಕರ್ನಾಟಕ ಸಂಘಕ್ಕೆ ಕನ್ನಡ ಭವನ ನಿರ್ಮಿಸಲು ಅಗತ್ಯವಿರುವ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಗುಜರಾತ್ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಹಮದಾಬಾದ್‌ನ ಕರ್ನಾಟಕ ಸಂಘಕ್ಕೆ ಕನ್ನಡ ಭವನ ನಿರ್ಮಿಸಲು ಅಗತ್ಯವಿರುವ ನಿವೇಶನ ಕೊಡಿಸುವ ನಿಟ್ಟಿನಲ್ಲಿ ಗುಜರಾತ್ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.ಅಹಮದಾಬಾದ್ ಕರ್ನಾಟಕ ಸಂಘ ಶನಿವಾರ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅಹಮದಾಬಾದ್ ನಗರವೊಂದರಲ್ಲೇ ಸಾವಿರಾರು ಕನ್ನಡ ಕುಟುಂಬಗಳು ಅನೇಕ ದಶಕಗಳಿಂದಲೂ ನೆಲೆಸಿವೆ. ನಿಮ್ಮೆಲ್ಲರ ಕನ್ನಡಸೇವೆ ನನಗೆ ಬಹಳ ಸಂತೋಷ ಉಂಟು ಮಾಡಿದೆ. ಕರ್ನಾಟಕ ಸಂಘಕ್ಕೆ ಸ್ವಂತ ಭವನ ಬೇಕು ಎಂದು ಕೇಳಿದ್ದೀರಿ. ಈ ಬಗ್ಗೆ ನಾನು ಅದಷ್ಟು ಬೇಗ ಗುಜರಾತ್ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.
ನಿಮ್ಮ ಭಾಷಾಭಿಮಾನಕ್ಕೆ ನಾನು ಮೂಕನಾಗಿದ್ದೇನೆ. ನನಗೆ ಬಹಳ ಸಂತೋಷ ಉಂಟಾಗಿದೆ. ನಾನು ಅಹಮದಾಬಾದ್‌ನಲ್ಲಿ ಇದ್ದೇನೆಯೋ ಅಥವಾ ಕರ್ನಾಟಕದಲ್ಲಿ ಇದ್ದೇನೆಯೋ ಎನ್ನುವ ಭಾವನೆ ಬರುವಷ್ಟು ಕನ್ನಡ ವಾತಾವರಣ ಇಲ್ಲಿದೆ. ‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಸಂದೇಶದಂತೆ ನೀವೆಲ್ಲರೂ ಕನ್ನಡಕ್ಕೆ ದೊಡ್ಡ ಸೇವೆ ಸಲ್ಲಿಸುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ವಿಶ್ವದೆಲ್ಲೆಡೆ ಕನ್ನಡಿಗರು:
ಕನ್ನಡಿಗರು ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ ಎನ್ನುವ ನಂಬಿಕೆ ಇಷ್ಟು ದಿನ ನನ್ನಲ್ಲಿ ಇತ್ತು. ಆದರೆ ಅಹಮದಾಬಾದ್‌ನಲ್ಲಿ ನಿಮ್ಮನ್ನು ನೋಡಿದ ಮೇಲೆ ನನ್ನ ಅಭಿಪ್ರಾಯ ಬದಲಾಗಿದೆ. ಕನ್ನಡಿಗರು ಅಹಮದಾಬಾದ್, ಬಿಲಾಯಿ ಮಾತ್ರವಲ್ಲದೆ ದೇಶ, ವಿಶ್ವದ ಎಲ್ಲೆಡೆ ನೆಲೆಸಿದ್ದಾರೆ. ಈ ಭೂಮಿಯ ಮೂಲೆ ಮೂಲೆಯಲ್ಲೂ ಕನ್ನಡಿಗರು ಬದುಕು ಅರಸಿಕೊಂಡು ಹೋಗಿ ನೆಲೆಸಿ ಕನ್ನಡದ ಸೇವೆ ಮಾಡುತ್ತಿದ್ದಾರೆ ಎಂದರು.ಗುಜರಾತ್ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ ಗೌಡ, ಅಹಮದಾಬಾದ್‌ನ ಕರ್ನಾಟಕ ಸಂಘದ ಅಧ್ಯಕ್ಷ ಎಚ್.ವಿ.ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಸುಮನ್‌ಲಾಲ್ ಕೊಡಿಯಾಲ್ ಬೇಲ್, ಗಾಂಧಿನಗರ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕಮಲೀಶ ಮತ್ತಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))