ಸಾರಾಂಶ
- ಚಳಿಯನ್ನು ಲೆಕ್ಕಿಸದೇ ಹೋರಾಟದಲ್ಲಿ ಭಾಗಿಯಾಗಿರುವ ಜಿಲ್ಲೆಯ ಸಾವಿರಾರು ಸಿಬ್ಬಂದಿ
- - - ಕನ್ನಡಪ್ರಭ ವಾರ್ತೆ, ದಾವಣಗೆರೆಗೌರವಧನ ಹೆಚ್ಚಳ ಮತ್ತು 6ನೇ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಸಂಘಟನೆಯಿಂದ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭವಾಗಿದೆ.
ಈ ಚಳವಳಿಯಲ್ಲಿ ದಾವಣಗೆರೆ ಜಿಲ್ಲೆಯಿಂದ ಸುಮಾರು 2000 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ರಾಜ್ಯ ಕಾರ್ಯದರ್ಶಿ ಅವರಗೆರೆ ಚಂದ್ರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ ನೇತೃತ್ವದಲ್ಲಿ ಭಾಗವಹಿಸಿ ಹೋರಾಟಕ್ಕೆ ಬಲ ತುಂಬಿದ್ದಾರೆ.ಗೌರವಧನ ಹೆಚ್ಚಿಸಬೇಕು, ಸುಪ್ರೀ ಕೋರ್ಟ್ ತೀರ್ಪಿನಂತೆ ನಿವೃತ್ತರಿಗೆ ಗ್ರಾಚ್ಯುಟಿ ನೀಡಬೇಕು, ಗುಜರಾತ್ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀಡಿರುವ ನಿರ್ದೇಶನದಂತೆ ಅಂಗನವಾಡಿ ಸೇವೆಯನ್ನು ''''ನಾಗರಿಕ ಸೇವೆ'''' ಎಂಬುದಾಗಿ ಪರಿಗಣಿಸಿ, ಕನಿಷ್ಠ ವೇತನ ನಿಗದಿಪಡಿಸಿ ಜಾರಿಗೊಳಿಸಬೇಕು, ರಾಜ್ಯ ಬಜೆಟ್‌ನಲ್ಲಿ ಕನಿಷ್ಠ ವೇತನ ನಿಗದಿಪಡಿಸಬೇಕು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯಾಗಿ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕಾರ್ಯಕರ್ತೆಯರಿಗೆ ಮಾಸಿಕ ₹15000 ಮತ್ತು ಸಹಾಯಕಿಯರಿಗೆ ಮಾಸಿಕ ₹10000 ಗೌರವಧನ ನೀಡಬೇಕು, ಅಂಗನವಾಡಿ ಸಿಬ್ಬಂದಿಯನ್ನು ''''''''ಸಿ'''''''' ಮತ್ತು ''''''''ಡಿ'''''''' ದರ್ಜೆ ನೌಕರರ ಸ್ಥಾನಮಾನ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಯುತ್ತಿದೆ.
ಧರಣಿಯಲ್ಲಿ ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್, ಅಂಗನವಾಡಿ ಪೆಡರೇಶನ್‌ನ ರಾಜ್ಯಾಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ ಮತ್ತಿತರರು ಪಾಲ್ಗೊಂಡಿದ್ದಾರೆ.- - -
-3ಕೆಡಿವಿಜಿ39: ಬೆಂಗಳೂರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹದಲ್ಲಿ ದಾವಣಗೆರೆಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.