ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಕೈಗೊಂಡಿರುವ ‘ಆಪರೇಷನ್ ಶುದ್ಧೀಕರಣ’ ಮುಂದುವರೆದ ಭಾಗವಾಗಿ ಕಾರಾಗೃಹಗಳಲ್ಲಿ ಎಐ ಕ್ಯಾಮೆರಾ, ಪೋರ್ಟಬಲ್ ಜಾಮರ್ ಅಳವಡಿಕೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಕೈಗೊಂಡಿರುವ ‘ಆಪರೇಷನ್ ಶುದ್ಧೀಕರಣ’ ಮುಂದುವರೆದ ಭಾಗವಾಗಿ ಕಾರಾಗೃಹಗಳಲ್ಲಿ ಎಐ ಕ್ಯಾಮೆರಾ, ಪೋರ್ಟಬಲ್ ಜಾಮರ್ ಅಳವಡಿಕೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.‘ಆಪರೇಷನ್ ಶುದ್ಧೀಕರಣ’ ಹೆಸರಿನಲ್ಲಿ ಜೈಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಅಭಿಯಾನ ಶುರುವಾಗಿದೆ. ಆದರೂ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಿಂತಿಲ್ಲ. ಜತೆಗೆ, ಜೈಲಿಗೆ ಡ್ರಗ್ಸ್, ಮೊಬೈಲ್ ಸರಬರಾಜು ಯತ್ನ ಮುಂದುವರಿದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾ ಕೈದಿಯಾಗಿರುವ ಗಂಡನಿಗೆ ನೀಡಲು ಮೂರು 5ಜಿ ಸಿಮ್, ಡ್ರಗ್ಸ್ ಹಾಗೂ ತಂಬಾಕು ಉತ್ಪನ್ನಗಳೊಂದಿಗೆ ಬಂದಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾರೆ.
ಹೀಗಾಗಿ ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.
ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (ಪ್ರಿಸನರ್ ಕಾಲಿಂಗ್ ಸಿಸ್ಟಂ) ಸೇರಿ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಇದರಿಂದ ಅನಧಿಕೃತ ಚಟುವಟಿಕೆ ತಡೆಗಟ್ಟಲು ಹಾಗೂ ಭದ್ರತಾ ಮೇಲ್ವಿಚಾರಣೆ ಪರಿಣಾಮಕಾರಿಗೊಳಿಸಲು ನೆರವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೋಟ್..
ಆಧುನಿಕ ತಂತ್ರಜ್ಞಾನಅಳವಡಿಕೆಯ ಅಗತ್ಯಬದಲಾಗುತ್ತಿರುವ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯ. ಸುರಕ್ಷತೆ ಮತ್ತು ಮೇಲ್ವಿಚಾರಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಂಪುಟ ಸಭೆಯಲ್ಲಿ ಹಲವು ತೀರ್ಮಾನ ಮಾಡಲಾಗಿದೆ.
- ಪ್ರಿಯಾಂಕ್ ಖರ್ಗೆ, ಗೃಹ ಸಚಿವರು