ಶ್ರೀನಿವಾಸಪ್ರಸಾದ್ ಪ್ರಾಮಾಣಿಕ ರಾಜಕಾರಣಿ

| Published : May 01 2024, 01:22 AM IST

ಸಾರಾಂಶ

ಅನಾರೋಗ್ಯದಿಂದ ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಅವರ ಕುಟುಂಬಕ್ಕೆ ನೋವನ್ನು ತಡೆಯುವಂತ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುವೆ

- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಮತ

ಫೋಟೋ- 30ಎಂವೈಎಸ್1, 2

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿ. ಶ್ರೀನಿವಾಸಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಚಿವ ಡಾ.ಎಚ್.ಸಿ. ಮಹದೇವಪ್ಪ ಇದ್ದರು.30ಎಂವೈಎಸ್3

ಶ್ರೀನಿವಾಸಪ್ರಸಾದ್ ಅವರ ಪತ್ನಿ ಡಿ. ಭಾಗ್ಯಲಕ್ಷ್ಮಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಸಾಂತ್ವನ ಹೇಳಿದರು.

----

ಕನ್ನಡಪ್ರಭ ವಾರ್ತೆ ಮೈಸೂರು

ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನದಿಂದ ತುಂಬಾ ಆಘಾತ ಆಗಿದೆ. ಅವರು ಸಮಾಜಕ್ಕೆ ಹೋರಾಟ ಮಾಡಿದ್ದಾರೆ. ಧೈರ್ಯದಿಂದ ಮುನ್ನುಗ್ಗಿದ ಪ್ರಾಮಾಣಿಕ ರಾಜಕಾರಣಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಅಶೋಕಪುರಂ ಎನ್‌.ಟಿ.ಎಂ.ಎಸ್‌. ಶಾಲೆಯಲ್ಲಿ ವಿ. ಶ್ರೀನಿವಾಸಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಇಟ್ಟವರು. ಅವರು ಸ್ವಾಭಿಮಾನದಿಂದ ಬದುಕಿದಂತಹ ರಾಜಕಾರಣಿ ಎಂದರು.

ಅನಾರೋಗ್ಯದಿಂದ ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಅವರ ಕುಟುಂಬಕ್ಕೆ ನೋವನ್ನು ತಡೆಯುವಂತ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುವೆ ಎಂದು ಅವರು ಹೇಳಿದರು.

ಶ್ರೀನಿವಾಸಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಸಾದ್ ಪತ್ನಿ, ಪುತ್ರಿಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮೊದಲಾದವರು ಇದ್ದರು.