ಸಾರಾಂಶ
ಸಂಜಯ ಡಾಂಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್ ಅಧ್ಯಯನಕ್ಕೆ ಉತ್ತಮ ಅವಕಾಶ ಕಲಿಸಿದೆ.
ಕನ್ನಡಪ್ರಭ ವಾರ್ತೆ ಹಾವೇರಿ
ಜಿಲ್ಲಾ ಕೇಂದ್ರ ಸ್ಥಳವಾದ ಹಾವೇರಿ ನಗರವು ಶೈಕ್ಷಣಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಡಾ. ಸಂಜಯ ಡಾಂಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್ ಅಧ್ಯಯನಕ್ಕೆ ಉತ್ತಮ ಅವಕಾಶ ಕಲಿಸಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಬರುವ ದಿನಗಳಲ್ಲಿ ಡಾ. ಸಂಜಯ ಡಾಂಗೆ ಶಿಕ್ಷಣ ಸಂಸ್ಥೆಗೆ ನೆರವು ನೀಡುವುದಾಗಿ ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಭರವಸೆ ನೀಡಿದರು.ಇಲ್ಲಿನ ಜಿಲ್ಲಾ ಗುರುಭವನದಲ್ಲಿ ಆಯೋಜಿದ್ದ ಡಾ. ಸಂಜಯ ಡಾಂಗೆ ಸಾಂಸ್ಕೃತಿಕ ಕಲಾ ವೈಭವ, ಪ್ರತಿಜ್ಞಾವಿಧಿ, ದೀಪಧಾರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್‌ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಮಹತ್ವದ ಜವಾಬ್ದಾರಿಯಿದೆ. ಸಮಾಜಕ್ಕೆ ನಿಮ್ಮ ಸೇವೆಯ ಅವಶ್ಯವಿದೆ. ಪ್ರಾಮಾಣಿಕತೆಯಿಂದ ಸೇವೆ ಮಾಡುವ ಮೂಲಕ ತಾವುಗಳು ಸಮಾಜಕ್ಕೆ ಒಳ್ಳೆಯ ಆಸ್ತಿಯಾಗಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಡಾ. ಸಂಜಯ ಡಾಂಗೆ ಮಾತನಾಡಿ, ಬಡವಿದ್ಯಾರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಿಲ್ಲದೇ ಪ್ಯಾರಾಮೆಡಿಕಲ್, ನರ್ಸಿಂಗ್ ಕೋಸ್‌ಗಳನ್ನು ಕಲಿಯಲು ಅವಕಾಶ ನೀಡಬೇಕೆಂದು ಸಂಸ್ಥೆ ಸ್ಥಾಪಿಸಲಾಗಿದೆ. ಪಾಲಕರು ನಮ್ಮ ಸಂಸ್ಥೆಯ ಮೇಲೆ ವಿಶ್ವಾಸವಿಟ್ಟು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳಿಸುತ್ತಿದ್ದಾರೆ. ಸಂಸ್ಥೆಯು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದರು.
ಮುಖ್ಯಅತಿಥಿಗಳಾಗಿ ನಗರಸಭೆಯ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಹಿರಿಯ ಮಖಂಡರಾದ ಎಸ್.ಎಫ್.ಎನ್. ಗಾಜಿಗೌಡ್ರ, ಎಂ.ಎಂ. ಹಿರೇಮಠ, ಪರಶುರಾಮ ಅಡಕಿ, ಸಂಸ್ಥೆಯ ಕಾರ್ಯದರ್ಶಿ ಡಾ. ಲಲಿತಾ ಡಾಂಗೆ, ನಿರ್ದೇಶಕ ಕೃಷ್ಣಾ ಡಾಂಗೆ, ಉಮೇಶ ತಳವಾರ ಹಾಗೂ ಪ್ರಾಚಾರ್ಯರಾದ ರವಿ ಕುಮಾರ, ರೇಷ್ಮಾ, ರಬ್ಬಾನಿ ಹೂಲಗೇರಿ, ಶಿಕ್ಷಣ ಸಂಸ್ಥೆಯ ಬೋಧಕ ಸಿಬ್ಬಂದಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇ ವೇಳೆ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.