ಸಾರಾಂಶ
ಬಳ್ಳಾರಿ: ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟ (ಎಐಡಿಎಸ್‌ಒ) ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ಸರ್ಕಾರದ ಆದೇಶದ ಪ್ರಕಾರ, 800 ಶಾಲೆಗಳನ್ನು ಮ್ಯಾಗ್ನೆಟ್ ಶಾಲೆಗಳು ಎಂದು ಗುರುತಿಸಲಾಗಿದೆ. ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಯ ಸುತ್ತಮುತ್ತಲಿನ 1ರಿಂದ 5 ಕಿ.ಮೀ ವ್ಯಾಪ್ತಿಯ 50ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳನ್ನು ತನ್ನಲ್ಲಿ ವಿಲೀನಗೊಳಿಸಿಕೊಳ್ಳಲಿದೆ. ಈ ಹೆಸರಿನಲ್ಲಿ ಆ ಶಾಲೆಗಳನ್ನು ಮುಚ್ಚಲಾಗುತ್ತದೆ. ಈಗ ಸ್ಥಾಪಿಸಲಾಗುತ್ತಿರುವ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಕೆಪಿಎಸ್ ಮಾಗ್ನೆಟ್ ಶಾಲೆಗೆ, ಹೊಂಗನೂರಿನ ಆರು ಕಿ.ಮೀ. ವ್ಯಾಪ್ತಿಯ 7 ಪ್ರಾಥಮಿಕ ಶಾಲೆಗಳನ್ನು ವಿದ್ಯಾರ್ಥಿ, ಉಪಾಧ್ಯಾಯರು ಮತ್ತು ಪರಿಕರಗಳ ಸಮೇತ ವಿಲೀನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ. 110ಕ್ಕೂ ಅಧಿಕ ಸಂಖ್ಯೆಯ ದಾಖಲಾತಿ ಹೊಂದಿರುವ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಒದ್ದಾಡುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕಿಮೀ ದೂರದ ಶಾಲೆಯ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದ್ದು, ಸರ್ಕಾರದ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಉಪಾಧ್ಯಕ್ಷೆ ಎಂ.ಶಾಂತಿ ಹಾಗೂ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ತಿಳಿಸಿದರು.
ಸಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಸದಸ್ಯರಾದ ತಿಪ್ಪೇಸ್ವಾಮಿ, ಅನುಪಮಾ, ಸದಸ್ಯರಾದ ಕಾಂತೇಶ್, ಪ್ರವೀಣ್, ರಂಜಿತ್, ರಾಜಶೇಖರ, ಕಿರಣ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳಡಿ ಸುತ್ತಲಿನ ಶಾಲೆಗಳ ವಿಲೀನದೊಂದಿಗೆ 25 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಕಂಟಕ ತಂದೊಡ್ಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಎಐಡಿಎಸ್‌ಒ ಸಂಘಟನೆಯ ಸದಸ್ಯರು ಬಳ್ಳಾರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))