ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‌ಒ ಆಗ್ರಹ

| Published : Sep 06 2025, 01:01 AM IST

ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‌ಒ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಅತಿಥಿ ಉಪನ್ಯಾಸಕರು, ಹಾಸನ, ಎಐಡಿಎಸ್‌ಒ,Guest Lecturer, Hassan, AIDSOರಾಜ್ಯದ ಪದವಿ ಕಾಲೇಜುಗಳಲ್ಲಿ ತರಗತಿಗಳು ಆರಂಭಗೊಂಡು ತಿಂಗಳು ಕಳೆದರೂ, ಇಂದಿಗೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗದಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಆತಂಕದಲ್ಲಿದೆ. ಕೂಡಲೇ ಗಮನಹರಿಸಿ ಸೂಕ್ತ ಕ್ರಮವನ್ನು ತುರ್ತಾಗಿ ಕೈಗೊಳ್ಳುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನೆನಗುದಿಗೆ ಬಿದ್ದಂತಾಗಿದೆ. ಇದರ ಪರಿಣಾಮವಾಗಿ ಪಾಠಮಾಲೆ ಆರಂಭವಾಗದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಮುಳುಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಹಾಸನ: ರಾಜ್ಯದ ಪದವಿ ಕಾಲೇಜುಗಳಲ್ಲಿ ತರಗತಿಗಳು ಆರಂಭಗೊಂಡು ತಿಂಗಳು ಕಳೆದರೂ, ಇಂದಿಗೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗದಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಆತಂಕದಲ್ಲಿದೆ. ಕೂಡಲೇ ಗಮನಹರಿಸಿ ಸೂಕ್ತ ಕ್ರಮವನ್ನು ತುರ್ತಾಗಿ ಕೈಗೊಳ್ಳುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ವಿದ್ಯಾರ್ಥಿನಿ ಮೇಘನಾ ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವುದರಿಂದ ಪಾಠಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ಮುಂದಿನ ತಿಂಗಳು ನಡೆಯಲಿರುವ ಆಂತರಿಕ ಪರೀಕ್ಷೆಗಳಿಗೂ ವಿದ್ಯಾರ್ಥಿಗಳು ಸಿದ್ಧರಾಗದ ಪರಿಸ್ಥಿತಿ ಉಂಟಾಗಿದೆ. ರಾಜ್ಯಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಪಾಠಗಳ ಕೊರತೆಯಿಂದ ಹತಾಶರಾಗಿದ್ದು, ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಒಂದು ಕಡೆ ವಿಶ್ವವಿದ್ಯಾಲಯ ಮಂಜೂರಾತಿ ಆಯೋಗ (ಯುಜಿಸಿ) ನೀಡಿರುವ ಹೊಸ ನಿರ್ದೇಶನಗಳು ಹಾಗೂ ಇನ್ನೊಂದು ಕಡೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದಿಂದಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ನೆನಗುದಿಗೆ ಬಿದ್ದಂತಾಗಿದೆ. ಇದರ ಪರಿಣಾಮವಾಗಿ ಪಾಠಮಾಲೆ ಆರಂಭವಾಗದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಮುಳುಗಿದ್ದಾರೆ ಎಂದು ಆತಂಕವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಚೈತ್ರಾ, ಸಹ ಸಂಚಾಲಕಿ ಸುಷ್ಮಾ, ಯಾಸ್ಮಿನ್, ಮೋಹನ್, ತಿಲಕ್, ಅಭಿಷೇಕ್ ಇತರರು ಉಪಸ್ಥಿತರಿದ್ದರು.