ಕನ್ನಡಪ್ರಭ ವಾರ್ತೆ ರಾಯಬಾಗ ಎಲ್ಲರನ್ನು ಪ್ರೀತಿಸುವ ವ್ಯಕ್ತಿಗಳು ಜನ ನಾಯಕರಾಗುತ್ತಾರೆ ಎಂಬುದಕ್ಕೆ ಶಾಸಕ ದುರ್ಯೋಧನ ಐಹೊಳೆಯವರೇ ಅತ್ಯುತ್ತಮ ನಿದರ್ಶನ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಕನ್ನಡಪ್ರಭ ವಾರ್ತೆ ರಾಯಬಾಗ
ಎಲ್ಲರನ್ನು ಪ್ರೀತಿಸುವ ವ್ಯಕ್ತಿಗಳು ಜನ ನಾಯಕರಾಗುತ್ತಾರೆ ಎಂಬುದಕ್ಕೆ ಶಾಸಕ ದುರ್ಯೋಧನ ಐಹೊಳೆಯವರೇ ಅತ್ಯುತ್ತಮ ನಿದರ್ಶನ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಮಹಾವೀರ ಭವನದಲ್ಲಿ ಗುರುವಾರ ಶಾಸಕ ದುರ್ಯೋಧನ ಐಹೊಳೆಯವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶಾಸಕ ದುರ್ಯೋಧನ ಐಹೊಳೆ ಅವರು ತಮ್ಮ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದರ ಮೂಲಕ ಎಲ್ಲರ ನೆಚ್ಚಿನ ನಾಯಕರಾಗಿದ್ದಾರೆ ಎಂದರು.
ಸಾಹಿತಿ ಡಾ.ವಿ.ಎಸ್.ಮಾಳಿ ಮಾತನಾಡಿ, ಶಾಸಕ ಐಹೊಳೆಯವರು ಗುರು ಬಲ ಮತ್ತು ಜನ ಬೆಂಬಲದಿಂದ ಈ ಎತ್ತರಕ್ಕೆ ಬೆಳೆದಿದ್ದಾರೆ. ಭಾಗ್ಯ ತುಂಬಿದರೆ ಶಾಸಕರು ಮುಂದಿನ ದಿನಗಳಲ್ಲಿ ಮಂತ್ರಿ ಕೂಡ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಆಶಯ ವ್ಯಕ್ತಪಡಿಸಿದರು.ಪರಮಾನಂದವಾಡಿ ಗುರುದೇವ ಬ್ರಹ್ಮಾನಂದ ಆಶ್ರಮದ ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿ, ಮೃದು ಸ್ವಭಾವದ ಶಾಸಕ ಐಹೊಳೆಯವರು, ಅಧಿಕಾರದ ಅಹಂ ಇಲ್ಲದೇ ಸರಳ ಜೀವಿಯಾಗಿ ಎಲ್ಲರ ಅಭಿಮಾನ ಮತ್ತು ಪ್ರೀತಿ ಗಳಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಬ್ಬೂರ ಗೌರಿಶಂಕರ ಮಠದ ರೇವಣಸಿದ್ಧ ಶಿವಾಚಾರ್ಯ ಮಾತನಾಡಿದರು. ಚಿತ್ರದುರ್ಗ ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ನಂದಿಕುರಳಿ ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ, ಶಾಸಕ ಡಿ.ಎಮ್.ಐಹೊಳೆ, ಮುಖಂಡರಾದ ಡಿ.ಎಸ್.ನಾಯಿಕ, ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರ್ಪಡೆ, ಸದಾನಂದ ಹಳಿಂಗಳಿ, ಅಣ್ಣಾಸಾಹೇಬ ಖೆಮಲಾಪೂರೆ, ರಾಮಚಂದ್ರ ನಿಶಾನದಾರ, ರಾಜಶೇಖರ ಖನದಾಳೆ, ವಿಜಯ ಕೋಟಿವಾಲೆ, ಅರುಣ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ ಸೇರಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಬುಧವಾರ ಲಿಂಗೈಕ್ಯರಾದ ಬಾವನಸೌಂದತ್ತಿಯ ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ ಅರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.