ಸರ್ಕಾರಿ ಶಾಲೆಗಳ ಫಲಿತಾಂಶವನ್ನು ಇನ್ನಷ್ಟು ಉತ್ತಮಪಡಿಸುವುದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ತರಗತಿಗಳನ್ನು ಆಯೋಜಿಸುವ ಮೂಲಕ ಶೇ.40ಕ್ಕಿಂತ ಹೆಚ್ಚಿನ ಫಲಿತಾಂಶಕ್ಕೆ ಸೀಮಿತವಾಗದೆ ಶೇ.60ಕ್ಕಿಂತ ಹೆಚ್ಚಿನ ಫಲಿತಾಂಶ ಸಾಧಿಸುವ ಗುರಿಯೊಂದಿಗೆ ಎಲ್ಲರೂ ಒಗ್ಗಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಸೂಚಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸರ್ಕಾರಿ ಶಾಲೆಗಳ ಫಲಿತಾಂಶವನ್ನು ಇನ್ನಷ್ಟು ಉತ್ತಮಪಡಿಸುವುದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ತರಗತಿಗಳನ್ನು ಆಯೋಜಿಸುವ ಮೂಲಕ ಶೇ.40ಕ್ಕಿಂತ ಹೆಚ್ಚಿನ ಫಲಿತಾಂಶಕ್ಕೆ ಸೀಮಿತವಾಗದೆ ಶೇ.60ಕ್ಕಿಂತ ಹೆಚ್ಚಿನ ಫಲಿತಾಂಶ ಸಾಧಿಸುವ ಗುರಿಯೊಂದಿಗೆ ಎಲ್ಲರೂ ಒಗ್ಗಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಸೂಚಿಸಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಜಿಲ್ಲಾಡಳಿತ, ಜಿಪಂ,ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಅಪರ ಆಯುಕ್ತ ಕಾರ್ಯಾಲಯ ಇವರ ಸಹಯೋಗದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ 2026-27ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಗುಣಾತ್ಮಕ ಫಲಿತಾಂಶ ಸುಧಾರಣೆಗಾಗಿ ಮಿಷನ್ 40+ ಸಂಕಲ್ಪ 2.0 ಕಾರ್ಯಕ್ರಮದ ವಿಭಾಗ ಮಟ್ಟದ ಸಂಪನ್ಮೂಲ ಶಿಕ್ಷಕರ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಶುಕ್ರವಾರ ಮಾತನಾಡಿದ ಅವರು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಸಾಧಿಸುವ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲು ನಾವು ಜಾರಿಗೆ ತಂದಿರುವ ಮಿಷನ್ 40+'''''''''''''''' ಎಂಬ ಅಭಿಯಾನದ ಉದ್ದೇಶ ಕೇವಲ ಫಲಿತಾಂಶವನ್ನು ಸುಧಾರಿಸು ವುದು ಮಾತ್ರವಲ್ಲ, ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದರ ಜತೆಗೆ ಅವರಲ್ಲಿ ಸಕಾರಾತ್ಮಕ ಬದಲಾವಣೆ ತರುವುದೂ ನಮ್ಮ ಗುರಿಯಾಗಿದೆ ಎಂದರು.

ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಮತ್ತು ಶಿಕ್ಷಕರೊಂದಿಗೆ ಬೆರೆಯುವಂತೆ ಮಾಡಬೇಕು. ಶಿಕ್ಷಕರಿಗೆ ಬೋಧನೇತರ ಕೆಲಸಗಳಿಗೆ ನಿಯೋಜಿಸುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸದಾಗಿ ಸಂಪನ್ಮೂಲ ವ್ಯಕ್ತಿ ಗಳಾಗಿ ಆಗಮಿಸಿದ ಶಿಕ್ಷಕರು ಹೊಸ ಹುರುಪಿನೊಂದಿಗೆ ನಾವಿನ್ಯಯುತ ಯೋಜನೆಗಳೊಂದಿಗೆ ಕಲಿಕೆಯನ್ನು ಉತ್ತಮವಾಗಿಸಲು ಶ್ರಮವಹಿಸಬೇಕು ಎಂದರು.

ನಂತರ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಡಯಟ್ ರಾಯಚೂರು ಮತ್ತು ಯಾದಗಿರಿ ಪ್ರಾಂಶುಪಾಲರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪದವಿ ಪೂರ್ವ ಪರೀಕ್ಷಾ ಮಂಡಳಿಯ ನಿರ್ದೇಶಕ ಭರತ್ ಎಸ್., ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕಿ ಅನಿತಾ ವಿ. ನಜಾರೆ, ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಆಡಳಿತ ನಿರ್ದೇಶಕಿ ಮಂಗಳ ನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿಗಳು, ಪ್ರೌಢ ಶಾಲೆಗಳ ಮುಖ್ಯಗುರುಗಳು, ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಯಟ್ ಉಪನ್ಯಾಸಕರು ಸೇರಿದಂತೆ ಇತರರು ಇದ್ದರು.

ಫಲಿತಾಂಶ ಸುಧಾರಣೆ ಮಾಡಲು ಕಾರ್ಯಯೋಜನೆ; ಸಮಾಲೋಚನೆ: ಕಾರ್ಯಾಗಾರದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಪ್ರತಿಯೊಂದು ತಾಲೂಕಿನ ಆರು ವಿಷಯಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಪ್ರೌಢಶಾಲೆಗಳ ಮುಖ್ಯಗುರುಗಳು ಮತ್ತು ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರು, ಎಲ್ಲರನ್ನೂ ಒಳ ಗೊಂಡಂತೆ ಸುಮಾರು 400ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಮುಂಬರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳ ಫಲಿ ತಾಂಶ ಸುಧಾರಣೆಗಾಗಿ ಕಾರ್ಯಯೋಜನೆ ಸಿದ್ಧಪಡಿಸುವ ಕುರಿತು ಸಮಾಲೋಚನೆ ನಡೆಸಿದರು.