10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಗುರಿ: ಶಾಸಕ ಜಿ.ಎಚ್.ಶ್ರೀನಿವಾಸ್

| Published : Sep 20 2025, 01:00 AM IST

10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಗುರಿ: ಶಾಸಕ ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ಸಾವಿರ ಕುಟುಂಬಗಳಿಗೆ ಮನೆಗಳ ಹಕ್ಕು ಪತ್ರ ವಿತರಿಸುವ ಗುರಿ ಹೊಂದಲಾಗಿದ್ದು ಇದರಿಂದ ಆ ಕುಟುಂಬವನ್ನು ಅವಲಂಭಿಸಿರುವ ಸುಮಾರು ನಲವತ್ತು ಸಾವಿರ ಜನರು ಪ್ರಯೋಜನ ಪಡೆಯುವಂತಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

- ತರೀಕೆರೆಯಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ । ಸರ್ಕಾರಿ ಯೋಜನೆಗಳ ಮಾಹಿತಿ ಸಂವಹನ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ತರೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ಸಾವಿರ ಕುಟುಂಬಗಳಿಗೆ ಮನೆಗಳ ಹಕ್ಕು ಪತ್ರ ವಿತರಿಸುವ ಗುರಿ ಹೊಂದಲಾಗಿದ್ದು ಇದರಿಂದ ಆ ಕುಟುಂಬವನ್ನು ಅವಲಂಭಿಸಿರುವ ಸುಮಾರು ನಲವತ್ತು ಸಾವಿರ ಜನರು ಪ್ರಯೋಜನ ಪಡೆಯುವಂತಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಶುಕ್ರವಾರ ತಾಲೂಕು ಅಡಳಿತ ತರೀಕೆರೆ ಮತ್ತು ತಾಪಂ, ಪುರಸಭೆ ತರೀಕೆರೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಂದಾಯ ಗ್ರಾಮ, ಉಪ ಗ್ರಾಮ, 94 ಸಿ, ಪೋಡಿ ಮುಕ್ತ ಗ್ರಾಮ, ಸ್ವಾಮಿತ್ವ ಯೋಜನೆ ಹಕ್ಕು ಪತ್ರಗಳು, ದಾಖಲೆಗಳು ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಮತ್ತು ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಸಂವಹನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದು ಒಂದು ಹೊಸ ರೀತಿ ಕಾರ್ಯಕ್ರಮ. ಚುನಾವಣೆ ಮುಗಿದ ನಂತರ ನಾನು ಧನ್ಯವಾದ ಹೇಳಲು ಕ್ಷೇತ್ರ ಪ್ರವಾಸ ಕೈ ಗೊಂಡಾಗ ಮನೆ, ನಿವೇಶನದ ಹಕ್ಕು ಪತ್ರ, ಇ-ಸ್ವತ್ತು ಕೊಡಿಸಿಕೊಡಲು ಜನರಿಂದ ಬೇಡಿಕೆ ಬಂದಿತ್ತು. ಕಂದಾಯ ಉಪ ಗ್ರಾಮ ಮತ್ತು ಉಪ ಗ್ರಾಮ ಮಾಡುವ ಬಗ್ಗೆ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಮತ್ತು ಸಚಿವರಾದ ಪ್ರಿಯಾಂಕ ಖರ್ಗೆ, ಕೃಷ್ಣೇ ಭೈರೇಗೌಡ ಅವರೊಂದಿಗೆ ಚರ್ಚೆ ಮಾಡಿ ವಿಧಾನ ಸಭಾ ಅಧಿವೇಶನದಲ್ಲೂ ಅನೇಕ ಬಾರಿ ಚರ್ಚಿಸಿದ ಹಿನ್ನಲೆಯಲ್ಲಿ ಕಂದಾಯ ಗ್ರಾಮ, ಉಪ ಗ್ರಾಮ 94-ಸಿ. ಫೋಡಿ ಮುಕ್ತ ಗ್ರಾಮ, ಸ್ವಾಮಿತ್ವ ಯೋಜನೆ ಹಕ್ಕು ಪತ್ರಗಳನ್ನು ವಿತರಿಸಲು ಅವಕಾಶವಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನರಿಗೆ ಅನುಕೂಲ ವಾಗುತ್ತಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ನಿವೇಶನಗಳನ್ನು ಗುರುತಿಸಲು ಅಧಿಕಾರಿಗಳರೊಂದಿಗೆ ಬೆಳಿಗ್ಗೆಯಿಂದ ಸಾಯಂಕಾಲದವರೆಗೂ ನಿರಂತರವಾಗಿ ಸಭೆಗಳನ್ನು ನಡೆಸಿದ್ದೇವೆ. ಕಂದಾಯ ಗ್ರಾಮ, ಉಪ ಗ್ರಾಮಗಳ ಬಗ್ಗೆ ವಿಧಾನ ಸಭೆಯಲ್ಲಿ ದೊಡ್ಡಮಟ್ಟದ ಚರ್ಚೆ ನಡೆದಿದೆ. ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಆಹ್ವಾನಿಸಿ ಈ ಬಗ್ಗೆ ಚರ್ಚಿಸಲಾಗಿದೆ. ಗ್ರಾಮಠಾಣ ವಿಸ್ತರಣೆ ಕುರಿತಂತೆ ನಿಯಮಗಳ ತೊಡಕು ಇದ್ದಾಗ ಈ ಬಗ್ಗೆ ಸರ್ಕಾರದ ಗಮನ ಸೆಳೆದು ತರೀಕೆರೆ ವಿಧಾನಸಭಾ ಕ್ಷೇತ್ರ ದಲ್ಲಿ ಮಾದರಿಯಾಗಿ ಪೈಲಟ್ ಪ್ರಾಜೆಕ್ಟ್‌ ನಂತೆ ಗ್ರಾಮಠಾಣ ವಿಸ್ತರಣೆ ಪ್ರಕರಣಗಳನ್ನು ಉಪಗ್ರಾಮಗಳನ್ನಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ವಿವರಿಸಿದರು.

ಈ ಕೆಲಸಕ್ಕೆ ಅನುವುಮಾಡಿದ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ, ಕೃಷ್ಣೇ ಬೈರೇಗೌಡ ಅವರಿಗೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಮತ್ತಿತರ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರ್ಕಾರದ ಸವಲತ್ತು ಜನರಿಗೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ. ಸರ್ಕಾರಿ ಸವಲತ್ತುಗಳನ್ನು ಜನರಿಗೆ ತಲುಪಿ ಸಬೇಕು. ಸ್ವಸಹಾಯ ಸಂಘಗಳು ಉತ್ಪಾದಿಸಿ ಪದಾರ್ಥಗಳಿಗೆ ಮಾರುಕಟ್ಟೆ ದೊರೆಯಬೇಕು ಎಂದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಸತತ ಪ್ರಯತ್ನದಿಂದ ಮನೆಗಳ ಹಕ್ಕುಪತ್ರ ವಿತರಣೆ ಮತ್ತಿತರ ಸೌಲಭ್ಯ ವಿತರಿಸಲಾಗುತ್ತಿದೆ. ಮೊಬೈಲ್ ಬಿಡಿ ಪುಸ್ತಕ ಓದಿ ಇತ್ಯಾದಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ತಾಲೂಕು ಕೆಡಿಪಿ ಸದಸ್ಯ ಎಚ್.ಎನ್.ಮಂಜುನಾಥ್ ಲಾಡ್ ಮಾತನಾಡಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಸತತ ಪ್ರಯತ್ನದಿಂದ ಕಂದಾಯ ಗ್ರಾಮ, ಉಪಗ್ರಾಮ, ಹಕ್ಕು ಪತ್ರಗಳ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿದೆ. ಹಕ್ಕು ಪತ್ರ ವಿತರಣೆಯಿಂದ ಫಲಾನುಭವಿಗಳಿಗೆ ಸೌಲಭ್ಯ ಪಡೆಯಲು ಅನುಕೂಲ ಎಂದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ ಮಾತನಾಡಿ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯವನ್ನು ಒಂದೇ ವೇದಿಕೆಯಲ್ಲಿ ವಿತರಿಸುವ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸ ಲಾಗಿದೆ. ಇದರಿಂದ ಎಲ್ಲ ಫಲಾನುಭವಿಗಳು ಸೌಲಭ್ಯದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳನ್ನು. ವಿವಿಧ ಇಲಾಖೆ ಸೌಲಭ್ಯ ವಿತರಿಸಲಾಯಿತು.

ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಉಪ ವಿಭಾಗಾಧಿಕಾರಿ ಎನ್.ವಿ.ನಟೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಪುರಸಭಾ ಸದಸ್ಯ ಟಿ.ದಾದಾಪೀರ್, ಅದಿಲ್ ಪಾಷ, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್. ಪ್ರಕಾಶ್ ವರ್ಮ, ಕೆಡಿಪಿ ಸದಸ್ಯರಾದ ರಚನಾ ಶ್ರೀನಿವಾಸ್, ಗಂಗಾಧರ್, ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಅಪ್ತ ಸಹಾಯಕ ಶ್ರೀನಿವಾಸ್, ತಹಸೀಲ್ದಾರ್ ವಿಶ್ವಜಿತ್ ಮೇಹತ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

-

19ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಉಪ ವಿಭಾಗಾಧಿಕಾರಿ ಎನ್.ವಿ. ನಟೇಶ್, ತಹಸೀಲ್ದಾರ್ ವಿಶ್ವಜಿತ್ ಮೇಹತಾ, ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಇದ್ದಾರೆ.