ಇಲಕಲ್ಲ ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ

| Published : Oct 26 2024, 01:00 AM IST

ಇಲಕಲ್ಲ ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ
Share this Article
  • FB
  • TW
  • Linkdin
  • Email

ಸಾರಾಂಶ

ಸಂಪೂರ್ಣವಾಗಿ ಇಲಕಲ್ಲ ನಗರವನ್ನು ಮಾದರಿ ನಗರವನ್ನಾಗಿಸುವ ಗುರಿ ಹೊಂದಿದ್ದೇನೆ. ಹೀಗಾಗಿ ನಿಮ್ಮ ಸಹಕಾರ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ನಗರದಲ್ಲಿ ನೂತನ ಎರಡು ಆ್ಯಂಬುಲೆನ್ಸ್, ಆಸ್ಪತ್ರೆ ಉನ್ನತೀಕರಣ, ಈಜುಕೊಳ, ಕ್ರೀಡಾಂಗಣ, ತಡೆಗೋಡೆ, ಕೆರೆ ಅಭಿವೃದ್ಧಿ, ಸ್ಮಾರ್ಟ್‌ ಕ್ಲಾಸ್, ಇಂದಿರಾ ಕ್ಯಾಂಟೀನ್, ಅನೇಕ ವಸತಿ ನಿಲಯಗಳಿಗೆ ಭೂಮಿ ಪೂಜೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸಂಪೂರ್ಣವಾಗಿ ಇಲಕಲ್ಲ ನಗರವನ್ನು ಮಾದರಿ ನಗರವನ್ನಾಗಿಸುವ ಗುರಿ ಹೊಂದಿದ್ದೇನೆ. ಹೀಗಾಗಿ ನಿಮ್ಮ ಸಹಕಾರ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

೨೦೨೨- ೨೩ನೇ ಸಾಲಿನ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದಲ್ಲಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೇವಲ ಮಾತನಾಡಿ ಹೋಗುವ ಶಾಸಕ ನಾನಲ್ಲ. ಯಾರ ಅವಧಿಯಲ್ಲಿ ಏನು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂಬುದನ್ನು ದಾಖಲೆ ತೆಗೆದು ನೋಡಿ. ಮತಕ್ಷೇತ್ರದಾದ್ಯಂತ ನಾನು ಹಿಂದೆ ಶಾಸಕನಾಗಿದ್ದಾಗ, ಮತ್ತೆ ಈ ಪ್ರಸ್ತುತ ಅವಧಿಯಲ್ಲಿ ಎಲ್ಲಾ ಕ್ಷೇತ್ರಗಳಿಗನುಗುಣವಾಗಿ ಸಾರ್ವಜನಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಅವಳಿ ನಗರದಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದೇನೆ ಎಂದು ಟೀಕೆ ಮಾಡುವವರಿಗೆ ಉತ್ತರ ನೀಡಿದರು.

ನಗರ ಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು, ಸಾರ್ವಜನಿಕರು ಇದ್ದರು.