ದಾಬಸ್‍ಪೇಟೆ: ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಗೆ ಸದಾ ಒತ್ತು ನೀಡುತ್ತೇವೆ. ಆ ನಿಟ್ಟಿನಲ್ಲಿ ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಟಾಪರ್ಸ್‍ಗೆ ವಿಮಾನಯಾನ ಪ್ರವಾಸ ಕೈಗೊಂಡು ಯಶಸ್ವಿಯಾಗಿ ಪೂರೈಸಿದ್ದೇವೆ ಎಂದು ಸೌಂದರ್ಯ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸೌಂದರ್ಯ ರಮೇಶ್ ಹೇಳಿದರು.

2025-26ನೇ ಶೈಕ್ಷಣಿಕ ಸಾಲಿನಲ್ಲಿ 600ಕ್ಕೂ ಹೆಚ್ಚು ಅಂಕಗಳನ್ನು ಪಡೆದಂತಹ ಶಾಲಾ ವಿದ್ಯಾರ್ಥಿಗಳಿಗೆ ವಿಮಾನಯಾನ ಟಿಕೆಟ್ ವಿತರಿಸಿ ಮಾತನಾಡಿದ ಅವರು, ಉತ್ತಮ ಅಂಕಗಳಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಬೆಂಗಳೂರಿನಿಂದ ಮಂಗಳೂರುವರೆಗೆ ವಿಮಾನದಲ್ಲಿ ಪ್ರಯಾಣಿಸುವುದಕ್ಕೆ ಆಡಳಿತ ಮಂಡಳಿ ಪರವಾಗಿ ಪೋಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಟಿಕೆಟ್ ವಿತರಿಸಿ ಪ್ರವಾಸಕ್ಕೆ ಶುಭ ಕೋರಿದ್ದೇವೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಭರತ್ ಸೌಂದರ್ಯ ಮಾತನಾಡಿ, ಮುಂಬರುವ ಶೈಕ್ಷಣಿಕ ವರ್ಷಗಳಲ್ಲಿ ವಿದ್ಯಾರ್ಥಿಗಳು ಈ ಒಂದು ವಿಮಾನಯಾನದ ಅವಕಾಶ ಸದುಪಯೋಗಪಡಿಸಿಕೊಳ್ಳುವಂತೆ ಉತ್ತೇಜನ ಪೂರ್ವಕವಾಗಿ ಬಳಸಿಕೊಂಡು, ಈ ವರ್ಷ ಆರಂಭ ನೀಡಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂತಹ ಅವಕಾಶಗಳು ಬಹಳ ವಿರಳ. ಹಾಗಾಗಿ ಈ ಒಂದು ಸದಾವಕಾಶ ಬಳಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಣ ಸಂಯೋಜಕಿ ಶಾರದಾ, ಮುಖ್ಯ ಶಿಕ್ಷಕ ಲಕ್ಷ್ಮೀಕಾಂತ್, ಶಿಕ್ಷಕ ವೃಂದದ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಫೆÇೀಟೋ 1 : ನೆಲಮಂಗಲ ತಾಲೂಕಿನ ಟಿ.ಬೇಗೂರು-ತ್ಯಾಮಗೊಂಡ್ಲು ರಸ್ತೆಯಲ್ಲಿರುವ ಸೌಂದರ್ಯ ನಾಲೆಡ್ಜ್ ಪಾರ್ಕ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಟಾಪರ್ಸ್‍ಗೆ ಸಂಸ್ಥೆಯ ಸಂಸ್ಥಾಪಕರಾದ ಸೌಂದರ್ಯ ರಮೇಶ್‌ ವಿಮಾನಯಾನ ಟಿಕೆಟ್ ವಿತರಿಸಿ ಪ್ರವಾಸಕ್ಕೆ ಶುಭ ಕೋರಿದರು.