ಸಾರಾಂಶ
ಸಿಪಿಐಎಂ ನೇತೃತ್ವದ ಎಡರಂಗ ಸರ್ಕಾರವು ಆಶಾ ಕಾರ್ಯಕರ್ತೆಯರ ನ್ಯಾಯೋಚಿತ ಬೇಡಿಕೆ ಈಡೇರಿಸುವ ಬದಲಿಗೆ ಹೋರಾಟ ದಮನ ಮಾಡುವ ಕೆಲಸ ಮಾಡುತ್ತಿದೆ. ಹೋರಾಟದ ಮುಂಚೂಣಿ ನಾಯಕರು ಮತ್ತು ಹೋರಾಟಕ್ಕೆ ಬೆಂಬಲಿಸಿದ ಬುದ್ಧಿಜೀವಿಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ಕೇರಳ ಆಶಾ ಕಾರ್ಯಕರ್ತೆಯರ ಹೋರಾಟ ಹತ್ತಿಕ್ಕುವ ಕೆಲಸವನ್ನು ಕೇರಳ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿ ಎಐಟಿಯುಸಿ ಪದಾಧಿಕಾರಿಗಳು ನಗರದ ರಾಮಸ್ವಾಮಿ ವೃತ್ತದಲ್ಲಿ ಬುಧವಾರ ಪ್ರತಿಭಟಿಸಿದರು.ಸಿಪಿಐಎಂ ನೇತೃತ್ವದ ಎಡರಂಗ ಸರ್ಕಾರವು ಆಶಾ ಕಾರ್ಯಕರ್ತೆಯರ ನ್ಯಾಯೋಚಿತ ಬೇಡಿಕೆ ಈಡೇರಿಸುವ ಬದಲಿಗೆ ಹೋರಾಟ ದಮನ ಮಾಡುವ ಕೆಲಸ ಮಾಡುತ್ತಿದೆ. ಹೋರಾಟದ ಮುಂಚೂಣಿ ನಾಯಕರು ಮತ್ತು ಹೋರಾಟಕ್ಕೆ ಬೆಂಬಲಿಸಿದ ಬುದ್ಧಿಜೀವಿಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಹಿನ್ನೆಲೆಯಲ್ಲಿ ಕೇರಳ ಆಶಾ ಕಾರ್ಯಕರ್ತೆಯರ ಹೋರಾಟ ಬೆಂಬಲಿಸಿ ಮತ್ತು ಅವರ ನ್ಯಾಯೋಚಿತ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಈ ವೇಳೆ ಕೇರಳ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕಾರ್ಮಿಕರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಜಿಲ್ಲಾಧ್ಯಕ್ಷೆ ಯಶೋದರ್, ಪಿ.ಎಸ್. ಸಂಧ್ಯಾ, ಶೀಬಾ, ಹರೀಶ್, ಮುದ್ದುಕೃಷ್ಣ ಮೊದಲಾದವರು ಇದ್ದರು.