ಸಾರಾಂಶ
ಕಲಬುರಗಿ ಜಿಲ್ಲೆಯ ಜೇವರ್ಗಿಯ ಶಾಂತಾ ನಗರದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್‌ನಲ್ಲಿ ಮೊಬೈಲ್ ಕ್ಯಾಮೆರಾವನ್ನು ಇಟ್ಟಿರುವ ಸಲೀಂ ಅಲಿ ಎಂಬ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಗದಗ: ಕಲಬುರಗಿ ಜಿಲ್ಲೆಯ ಜೇವರ್ಗಿಯ ಶಾಂತಾ ನಗರದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್‌ನಲ್ಲಿ ಮೊಬೈಲ್ ಕ್ಯಾಮೆರಾವನ್ನು ಇಟ್ಟಿರುವ ಸಲೀಂ ಅಲಿ ಎಂಬ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ನಗರ ಕಾರ್ಯದರ್ಶಿ ನಿಖಿತಾ ಸುತಾರ ಮಾತನಾಡಿ, ಇಂಥಹ ಕೃತ್ಯವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಜೇವರ್ಗಿಯ ಶಾಂತಾನಗರದ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್‌ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾವನ್ನು ಇಟ್ಟಿರುವ ಸಲೀಂ ಅಲಿ ಎನ್ನುವ ವ್ಯಕ್ತಿ ಈ ಕೃತ್ಯವನ್ನು ಮಾಡಿದ್ದಾನೆ. ಈ ರೀತಿಯ ಘಟನೆಯಿಂದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ಗೆ ಕಳಿಸಬೇಕೋ? ಬೇಡವೋ? ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ಪದೇ ಪದೇ ರಾಜ್ಯದಲ್ಲಿ ಇಂಥಹ ಘಟನೆಗಳು ಬೆಳಕಿಗೆ ಬರುತ್ತಿದ್ದು ರಾಜ್ಯದ ಕಾನೂನು ವ್ಯವಸ್ಥೆಯನ್ನು ಪ್ರಶ್ನೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರ ಮತ್ತು ಪೊಲೀಸ್ ಇಲಾಖೆ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಪ್ರಕರಣದ ಆರೋಪಿಯನ್ನು ಯಾವುದೇ ಒತ್ತಡಕ್ಕೆ ಮಣಿಯದೇ ಪೊಲೀಸ್ ಇಲಾಖೆಯು ಸೂಕ್ತ ರೀತಿಯ ತನಿಖೆಗೆ ಒಳಪಡಿಸಬೇಕು. ಸರ್ಕಾರವು ಈ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡದೆ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಈ ರೀತಿಯ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಅರುಣ ಬಾರಕೇರ, ಕಾರ್ಯದರ್ಶಿ ಅಭಿಷೇಕ ಮಲ್ಲನಗೌಡ್ರ, ಹರ್ಷ ಕಟ್ಟಿ, ಕೊಟ್ರೇಶ, ಉದಯ ಸೇರದಿಂತೆ ಎಬಿವಿಪಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.