ಸಾರಾಂಶ
ತಾಲೂಕಿನ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಚ್.ಸಿ.ಜಯಮುತ್ತು ಅವಿರೋಧವಾಗಿ ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆಯಾಗಿದ್ದಾರೆ.
ಚನ್ನಪಟ್ಟಣ: ತಾಲೂಕಿನ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಚ್.ಸಿ.ಜಯಮುತ್ತು ಅವಿರೋಧವಾಗಿ ಪುನರಾಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರತ್ನಮ್ಮ ಆಯ್ಕೆಯಾಗಿದ್ದಾರೆ.
ತಾಲೂಕಿನ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಎಚ್.ಸಿ.ಜಯಮುತ್ತು ಮತ್ತು ರತ್ನಮ್ಮ ನಾಮಪತ್ರ ಸಲ್ಲಿಸಿದ್ದರು. ಅವರ ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಎಚ್.ಸಿ.ಜಯಮುತ್ತು ಮತ್ತು ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧ ಆಯ್ಕೆ ಪ್ರಕಟಿಸಿದರು.ಸಂಘದ ನಿರ್ದೇಶಕರಾದ ಗಿರೀಶ್, ರಾಜಣ್ಣ, ಜವರಾಯು, ದೇವರಾಜು, ಅಧ್ಯಕ್ಷ ಶಿವಸ್ವಾಮಿ, ಸವಿತ, ರಾಮಕೃಷ್ಣ, ನಾಗರಾಜು, ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಮುಖಂಡರಾದ ಚೆನ್ನಗಿರಿಗೌಡ, ರಾಮೇಗೌಡ, ಮರಿಸ್ವಾಮಿ, ಶ್ರೀನಿವಾಸ್, ಶಿವನಂಜೇಗೌಡ, ಚಾಮೇಗೌಡ, ಪ್ರದೀಪ್, ತಿಬ್ಬಾ, ಈರೇಗೌಡ, ಕುಮಾರ್, ನಾರಾಯಣ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಪೊಟೋ೧೭ಸಿಪಿಟಿ೧: ಚನ್ನಪಟ್ಟಣ ತಾಲೂಕಿನ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಚ್.ಸಿ.ಜಯಮುತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರತ್ನಮ್ಮ ಅವರನ್ನು ಜೆಡಿಎಸ್ ಮುಖಂಡರು ಅಭಿನಂದಿಸಿದರು.