ಪುತ್ತೂರು: ಅಕ್ಷಯ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂ ಎಸಿ ಎಸೋಸಿಯೇಷನ್ ವತಿಯಿಂದ ನಡೆಯಿತು.ಕಾರ್ಯಕ್ರಮಕ್ಕೆ ಆಗಮಿಸಿ ಆಟಿಲಿಯರ್ ಬಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಅವರು ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ, ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ, ಈ ಕಲೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಇವರು ಹೀಗೆಯೇ ಅನೇಕ ಉತ್ತಮ ರೀತಿಯ ಲೇಖನಗಳು ಬರುತ್ತಿರಲಿ ಎಂದು ಹಾರೈಸಿದರು. ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿಎ, ಎಲೈಟ್ ಎಸೋಸಿಯೇಷನ್ ಸಂಯೋಜಕಿ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳು ಹಾಜರಿದ್ದರು. ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.