ಸಹಕಾರ ರತ್ನ ಪ್ರಶಸ್ತಿಗೆ ಆಲತ್ತೂರು ಜಯರಾಂ ಭಾಜನ

| Published : Nov 16 2024, 12:35 AM IST

ಸಹಕಾರ ರತ್ನ ಪ್ರಶಸ್ತಿಗೆ ಆಲತ್ತೂರು ಜಯರಾಂ ಭಾಜನ
Share this Article
  • FB
  • TW
  • Linkdin
  • Email

ಸಾರಾಂಶ

ಸಹಕಾರಿ ಕ್ಷೇತ್ರದ ಸೇವೆ ಪರಿಗಣಿಸಿ ತಾಲೂಕಿನ ಧುರೀಣ ಆಲತ್ತೂರು ಜಯರಾಂಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಸಹಕಾರಿ ಕ್ಷೇತ್ರದ ಸೇವೆ ಪರಿಗಣಿಸಿ ತಾಲೂಕಿನ ಧುರೀಣ ಆಲತ್ತೂರು ಜಯರಾಂಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.

೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರಂಭ ನ.೧೭ರ ಬೆಳಗ್ಗೆ ೧೦ ಗಂಟೆಗೆ ಬಾಗಲಕೋಟೆಯ ನವನಗರದಲ್ಲಿ ನಡೆಯಲಿದ್ದು, ಅಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿಯಮಿತ ಹೇಳಿದೆ. ಕರ್ನಾಟಕ ರಾಜ್ಯ ಸಹಕಾರ ಚಳವಳಿಯ ಬೆಳಗಣಿಗೆಗೆ ಆಲತ್ತೂರು ಜಯರಾಂ ಸಲ್ಲಿಸಿರುವ ಸೇವೆ ಗುರುತಿಸಿ ಈ ಸಾಲಿನ ಸಹಕಾರ ರತ್ನ ಪ್ರಶಸ್ತಿ ನೀಡಲಾಗಿದೆ.

ಜಯರಾಂ ಹಿನ್ನೆಲೆ: ಆಲತ್ತೂರು ಜಯರಾಂ ಎಂದೇ ಚಿರಪರಿಚಿತರಾದ ಆರ್.ಜಯರಾಂ ಕಳೆದ ಮೂರು ದಶಕಗಳ ಕಾಲ ಸಹಕಾರಿ ಕ್ಷೇತ್ರದಲ್ಲಿ ಒಂದಲ್ಲ ಒಂದು ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಆಲತ್ತೂರು ಬಳಿಯ ಶೆಟ್ಟಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ ೨೫ ವರ್ಷಗಳಿಂದಲೂ ಅಧ್ಯಕ್ಷರಾಗಿದ್ದಾರೆ. ಗುಂಡ್ಲುಪೇಟೆ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ (ಟಿಎಪಿಸಿಎಂಎಸ್‌) ಅಧ್ಯಕ್ಷ, ಪ್ರಸ್ತುತ ಅಧ್ಯಕ್ಷರಾಗಿ (೨ ನೇ ಬಾರಿಗೆ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಲ್ಲಿ ೨ನೇ ಬಾರಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಹಕಾರ ಕ್ಷೇತ್ರವಲ್ಲದೇ ತಾಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿಎಪಿಸಿಎಂಎಸ್‌ ಅಧ್ಯಕ್ಷ ಆಲತ್ತೂರು ಜಯರಾಂಗೆ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಘೋಷಿಸಿರುವುದಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅಭಿನಂದನೆ ಸಲ್ಲಿಸಿದ್ದಾರೆ. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್‌, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್‌ ಅಭಿನಂದಿಸಿದ್ದಾರೆ.ರಾಜ್ಯ ಸರ್ಕಾರ ನನ್ನನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಹಕಾರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರ ಸಹಕಾರದಿಂದ ಪ್ರಶಸ್ತಿ ಬಂದಿದೆ. ಸರ್ಕಾರಕ್ಕೆ ಹಾಗೂ ಸಹಕಾರಿಗಳಿಗೂ ಧನ್ಯವಾದ ಸಲ್ಲಿಸುತ್ತೇನೆ.

-ಆಲತ್ತೂರು ಜಯರಾಂ, ಸಹಕಾರ ಪ್ರಶಸ್ತಿ ಪುರಸ್ಕೃತ