ಸಾರಾಂಶ
ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಮದ್ಯ ಸೇವನೆ ತ್ಯಜಿಸಿ ನೆಮ್ಮದಿ ಬದುಕು ಸಾಗಿಸಲು ಅರಿವು, ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕರಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಆರ್‌ಟಿಒ ಮಲ್ಲಿಕಾರ್ಜುನ ತಿಳಿಸಿದರು.ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಹಮ್ಮಿಕೊಂಡಿದ್ದ ಮದ್ಯವರ್ಜನೆ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಂಚಮಹಾ ರೋಗದಲ್ಲಿ ಕುಡಿತ ಕೂಡ ಒಂದಾಗಿದೆ. ದುಶ್ಚಟ, ದುರಾಭ್ಯಾಸ ಮುಕ್ತ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ನ.27ರಿಂದ ಗ್ರಾಮದಲ್ಲಿ ವಿಶೇಷವಾಗಿ ಒಂದು ವಾರಗಳ ಕಾಲ ಮದ್ಯ ವರ್ಜನ ಶಿಬಿರವನ್ನು ಸಿದ್ದಾರೂಢಸ್ವಾಮಿ ಮಠದ ಕುರುಹಿನಶೆಟ್ಟಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಲು ಎಲ್ಲರೂ ಮುಂದಾಗಬೇಕು. ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ವಿನಂತಿಸಿದರು.ಸಂಸ್ಥೆ ಜಿಲ್ಲಾ ನಿರ್ದೇಶಕ ಯೋಗೇಶ್ ಮಾತನಾಡಿ, ಗಾಂಧೀಜಿಯವರ ಪಾನ ಮುಕ್ತ ಕನಸಿನ ಭಾರತ ನಿರ್ಮಾಣಕ್ಕೆ ಸಾಂಘಿಕ ಯತ್ನ, ಸಹಕಾರ ಬೇಕಿದೆ ಎಂದರು.
ಇದೇ ವೇಳೆ ಸಮಾವೇಶಕ್ಕೆ ಊಟ, ವಸತಿ ಮತ್ತಿತರ ಸಂಪನ್ಮೂಲ ಕ್ರೌಢೀಕರಿಸಲು ಸಲಹೆ ಸೂಚನೆ ಸಭೆಯಲ್ಲಿ ಚರ್ಚಿಸಲಾಯಿತು. ಶಿಬಿರದ ಯಶಸ್ಸಿಗಾಗಿ ಉಪಸಮಿತಿಯನ್ನು ರಚಿಸಲಾಯಿತು.ಕಿಕ್ಕೇರಿ ಗ್ರಾಪಂ ಅಧ್ಯಕ್ಷ ಕೆ.ಬಿ. ಚಂದ್ರಶೇಖರ್, ಮಾಜಿ ಅಧ್ಯಕ್ಷ ಕೆ.ಜಿ.ಪುಟ್ಟರಾಜು, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ನಳಿನಿ, ಸದಸ್ಯರಾದ ಶಿವರಾಂ, ನಾರಾಯಣಸ್ವಾಮಿ, ಕುಮಾರ್, ಹರಿಣಿ, ಕಿಕ್ಕೇರಿ ವಲಯ ಯೋಜನಾಧಿಕಾರಿ ಪ್ರಸಾದ್, ಮೇಲ್ವಿಚಾರಕರಾದ ನಂದಿನಿ, ವಿಮಲಾ, ರಂಗೇಗೌಡ, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.
ನಾಳೆ ವಿವಿಧ ಚಟುವಟಿಕೆಗಳ ಉದ್ಘಾಟನೆಮಳವಳ್ಳಿ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.14ರಂದು ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ಕ್ರಾಸ್ ಹಾಗೂ ಇತರೆ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 11ಗಂಟೆಗೆ ಕನ್ನಡ ರಾಜೋತ್ಸವ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಉದ್ಘಾಟಿಸುವರು. ಪ್ರಾಂಶುಪಾಲರಾದ ಡಿ.ಯಶೋಧ ಅಧ್ಯಕ್ಷತೆ ವಹಿಸಲಿದ್ದಾರೆ. ಕೋಡಿಹಳ್ಳಿಯ ಗೌರಮ್ಮ ಕೆಂಪೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ವೆಂಕಟೇಶ್ ಪ್ರದಾನ ಭಾಷಣ ಮಾಡಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ರವೀಂದ್ರ ಕುಮಾರ್, ತಹಸೀಲ್ದಾರ್ ಎಸ್.ವಿ.ಲೋಕೇಶ್, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಿದ್ದಾರ್ಥ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಕಾರ್ಯದರ್ಶಿ ಸಿ.ಕುಮಾರ್ ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))