ಸಾರಾಂಶ
ಆಲ್ದೂರು: ಕಾಶ್ಮೀರದ ಪಹಲ್ಗಾಮ್ ದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಆಲ್ದೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.
ಆಲ್ದೂರು: ಕಾಶ್ಮೀರದ ಪಹಲ್ಗಾಮ್ ದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಆಲ್ದೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.
ಹಳ್ಳಿಗಳು, ಕೂಲಿ ಕಾರ್ಮಿಕರೇ ಹೆಚ್ಚಿರುವ ಆಲ್ದೂರು ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಎಲ್ಲಾ ವ್ಯಾಪಾರ ವಹಿವಾಟು ಆರಂಭ ಗೊಂಡಿತ್ತು. ಆದರೆ, ಬಂದ್ ಹಿನ್ನೆಲೆಯಲ್ಲಿ ವಾರದ ಸಂತೆ ರದ್ದುಗೊಳಿಸಿ ಆಲ್ದೂರು ಪಟ್ಟಣ ಬಂದ್ ಮಾಡಲಾಯಿತು.ಬಂದ್ ವಿಷಯ ತಿಳಿಯುತ್ತಿದ್ದಂತೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ಗೊಳಿಸಿ ಮಾಲೀಕರು ಬಂದ್‌ಗೆ ಸಹಕರಿಸಿದರು. ಜನರ ಓಡಾಟ ವಿರಳವಾಗಿತ್ತು. ವಿಷಯ ತಿಳಿಯದೆ ಸಂತೆಗೆ ಬಂದವರು ಬಂದ ದಾರಿಗೆ ಸುಂಕವಿಲ್ಲದಂತೆ ಮನೆಯ ಹಾದಿ ತುಳಿ ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಆಸ್ಪತ್ರೆ, ಔಷಧಿ ಅಂಗಡಿ ಹೊರತುಪಡಿಸಿದರೆ ಬೇರೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಸಂತೆ ಮೈದಾನದಲ್ಲಿ ವಾರಕ್ಕೊಮ್ಮೆ ನಡೆಯುವ ವಾರದ ಸಂತೆ ರದ್ದುಗೊಂಡಿದ್ದರಿಂದ ಬಿಕೋ ಎನ್ನುತ್ತಿತ್ತು. ಆದರೆ, ಬಸ್ ಮತ್ತು ಆಟೋ ಸಂಚಾರ ಎಂದಿನಂತೆ ಇತ್ತು. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಬಂದ್ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 3 ಕೆಸಿಕೆಎಂ 8ಹಿಂದೂಗಳ ಹತ್ಯೆ ಖಂಡಿಸಿ ಶನಿವಾರ ಆಲ್ದೂರು ಬಂದ್ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.------------------------